ಧಾರವಾಡ: ಬುಧವಾರ ಆರೋಗ್ಯ ಇಲಾಖೆ ಪ್ರಕಟಿಸಿದ ಹೆಲ್ತ್ ಬುಲೆಟಿನ್ ನಲ್ಲಿ ಮರಣ ಪ್ರಕರಣಗಳ ಅನುಬಂಧದಲ್ಲಿ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿಯ ಗಣೇಶ್ ನಗರದ ನಿವಾಸಿಯೊಬ್ಬರ ಸಂಖ್ಯೆಯನ್ನು ತಪ್ಪಾಗಿ ನಮೂದಿಸಲಾಗಿದೆ.
ಈ ಕುರಿತು ಸ್ಪಷ್ಟನೆ ನೀಡಿರುವ ಇಲಾಖೆ ಹಿರೇಹೊನ್ನಳ್ಳಿಯ ಪಿ-18,708 ಕೋವಿಡ್‍ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಸಮೀಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣ್ತಪ್ಪಿನಿಂದಾಗಿರುವ ಈ ಅಚಾತುರ್ಯಕ್ಕೆ ಆರೋಗ್ಯ ಇಲಾಖೆ ವಿಷಾದ ವ್ಯಕ್ತಪಡಿಸಿದೆ.