ETV Bharat / state

ಧಾರವಾಡ ಲಾಕ್‌ಡೌನ್ ಮುಂದುವರಿಕೆ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ತೀರ್ಮಾನ - coronavirus updates

ಬೆಂಗಳೂರು ಲಾಕ್‌ಡೌನ್ ಮುಂದುವರಿಸುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಹೀಗಾಗಿ ಮೇಲಿನವರ ಜೊತೆ ಮಾತನಾಡಿ ಮುಂದಿನ ನಿರ್ಣಯ ತೆಗೆದುಕೊಳ್ಳುತ್ತೇವೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಸಚಿವ ಶೆಟ್ಟರ್
ಸಚಿವ ಶೆಟ್ಟರ್
author img

By

Published : Jul 20, 2020, 5:21 PM IST

ಧಾರವಾಡ: ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರಿಸುವ ಬಗ್ಗೆ ಚರ್ಚಿಸಬೇಕಿದೆ. ಜು.24 ರವರೆಗೆ ಲಾಕ್‌ಡೌನ್ ಇದೆ. ಗುರುವಾರ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಸಚಿವ ಜಗದೀಶ್ ಶೆಟ್ಟರ್ ಮಾಹಿತಿ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಲಾಕ್‌ಡೌನ್ ಮುಂದುವರಿಸುವುದಿಲ್ಲ ಎಂದು ಸಿಎಂ ಹೇಳಿದ್ದಾರೆ. ಹೀಗಾಗಿ ಮೇಲಿನವರ ಜೊತೆ ಮಾತನಾಡಿ ಮುಂದಿನ ನಿರ್ಣಯ ತೆಗೆದುಕೊಳ್ಳುತ್ತೇವೆ. ಧಾರವಾಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ ಅತಿ ಹೆಚ್ಚು ಕೇಸ್ ದಾಖಲಾಗಿವೆ. ಇದಕ್ಕಾಗಿ ಏನು ವ್ಯವಸ್ಥೆ ಮಾಡಬೇಕು ಅದು ಮಾಡುತ್ತೇವೆ. ಇದು ಹೆಚ್ಚು ಹರಡದಂತೆ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಲು ಕ್ರಮ ಜರುಗಿಸಲಾಗುವುದು. ಈ ಸಂಬಂಧ ಕಿಮ್ಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ ಎಂದರು.

ಪಾಸಿಟಿವ್ ಕೇಸ್ ಜಾಸ್ತಿ ಆಗಿದ್ದಕ್ಕೆ ಧಾರವಾಡ ಜಿಲ್ಲೆಯ ಜನ ಗಾಬರಿ ಪಡಬೇಕಾಗಿಲ್ಲ. ನಮ್ಮಲ್ಲಿ ಮಾತ್ರವಲ್ಲ ಬೆಂಗಳೂರು ಮತ್ತು ಬೇರೆ ಕಡೆಯೂ ಪಾಸಿಟಿವ್ ವರದಿ ಹೆಚ್ಚಾಗಿವೆ. ಇದಕ್ಕೆ ಜನಜಾಗೃತಿಯ ಅಗತ್ಯ ಇದೆ. ಧಾರವಾಡ ಕೇಸ್ ಹೆಚ್ಚಳ ಹಿನ್ನೆಲೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಸೋಂಕಿತರನ್ನು ದಾಖಲು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.