ಧಾರವಾಡ: ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಒತ್ತಾಯಿಸಿ ವೈದ್ಯಕೀಯ, ಅರೆ ವೈದ್ಯಕೀಯ ನೌಕರರು ಹಾಗೂ ಕಚೇರಿ ಸಿಬ್ಬಂದಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಡಿಎಚ್ಓ ಕಚೇರಿ ಎದುರು ಜಮಾಯಿಸಿದ ಸಿಬ್ಬಂದಿ ಕೆಲಹೊತ್ತು ಪ್ರತಿಭಟಿಸಿ, ನೌಕರರು, ರಾಜ್ಯ ಸರ್ಕಾರ, ರಾಜ್ಯ ಸರ್ಕಾರ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ಸಿಬ್ಬಂದಿ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ವರ್ಷದಿಂದ ಮನವಿ ಮಾಡಿದರು. ಅಧಿಕಾರಿಗಳು ಹಾಗೂ ಸರ್ಕಾರ ಸ್ಪಂದಿಸಿಲ್ಲ ಎಂದು ಅವರು ದೂರಿದರು.
ಆರೋಗ್ಯ ಕ್ಷೇತ್ರದ ಬಜೆಟ್ ಹೆಚ್ಚಳ, ಕೇಂದ್ರ ಸರ್ಕಾರದ ಆರ್ಥಿಕ ನೆರವು, ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ, ನೌಕರರ ಹುದ್ದೆ ಖಾಯಂ ಮಾಡುವುದು, ವೇತನ ಭತ್ಯ ಹಾಗೂ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಪ್ರಸಕ್ತ ಅಧಿವೇಶನ ವೇಳೆಯಲ್ಲಿ ತಮ್ಮ ಬೇಡಿಕೆ ಈಡೇರಿಸದಿದ್ದರೆ, ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿಕೆ ನೀಡಿದರು. ಬಳಿಕ ಆರೋಗ್ಯ-ಕುಟುಂಬ ಕಲ್ಗಾಯ ಇಲಾಖೆ ಜಿಲ್ಲಾ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.