ಧಾರವಾಡ : ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಾನುನಗರದಲ್ಲಿ ಈ ಘಟನೆ ನಡೆದಿತ್ತು. ಈರಣ್ಣ ಪಾಟೀಲ್ ಎಂಬಾತ ತನ್ನ ಸಹಚರರೊಂದಿಗೆ ಸೇರಿಕೊಂಡು ಭರತ ಪಟ್ಟಣಶೆಟ್ಟಿ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದನು.
ಭರತ ಧಾರವಾಡ ಕೆಯುಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಹಲ್ಲೆ ನಡೆಸಿದ ಆರೋಪಿ ಈರಣ್ಣ ಪಾಟೀಲ ತಮ್ಮ ಮನೆಗೆ ಭರತನನ್ನು ಊಟಕ್ಕೆಂದು ಕರೆದುಕೊಂಡು ಹೋಗಿ ಮಾರಣಾಂತಿಕ ಹಲ್ಲೆ ಮಾಡಿದ್ದ. ಭರತ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಹಿಜಾಬ್ ನಿರ್ಬಂಧ ಪ್ರಶ್ನಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ಪೂರ್ಣ.. ತೀರ್ಪು ಕಾಯ್ದಿರಿಸಿದ ಹೈಕೋರ್ಟ್