ETV Bharat / state

ಧಾರವಾಡ: ನೆರೆ ಸಂತ್ರಸ್ತರಿಗೆ ಕೊಡಗು ಮಾದರಿ ಪರಿಹಾರಕ್ಕಾಗಿ ಆಗ್ರಹ - kannada news

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಸಂತ್ರಸ್ತರಿಗೆ ಕೊಡಗು ಮಾದರಿಯಲ್ಲಿ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್​ನಿಂದ ಮಾಜಿ ಸಚಿವ ವಿನಯ ಕುಲಕರ್ಣಿ ನೇತೃತ್ವದಲ್ಲಿ, ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಸೂಕ್ತ ಪರಿಹಾರಕ್ಕಾಗಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಯಿತು
author img

By

Published : Aug 13, 2019, 7:53 PM IST

ಧಾರವಾಡ: ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಜಿಲ್ಲೆಯ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ವಿನಯ ಕುಲಕರ್ಣಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರವಾಹದಲ್ಲಿ ಸಿಲುಕಿ ಮನೆ, ಬೆಳೆ ನಷ್ಟ ಹೊಂದಿದವರಿಗೆ ಕೂಡಲೇ ಕೊಡಗು ಮಾದರಿಯಲ್ಲಿ ಪರಿಹಾರ ನೀಡಬೇಕು. ಅಲ್ಲದೇ ಸತತ ಬರಗಾಲ ಮತ್ತು ನೆರೆಗೆ ಸಿಲುಕಿದ ರೈತರ ಎಲ್ಲ ಸಾಲ, ಮನ್ನಾ ಮಾಡಬೇಕು. ರಾಜ್ಯದ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಹಾಗೂ‌ ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ನೆರೆಯಿಂದ ಹಾಳಾಗಿರುವ ರಸ್ತೆ, ಸೇತುವೆಗಳನ್ನು ಕೂಡಲೇ ದುರಸ್ತಿ ಮಾಡಬೇಕು ಮತ್ತು ಚೆಕ್ ಡ್ಯಾಮ್, ಕೆರೆ ಕಟ್ಟೆಗಳನ್ನು ಶಾಶ್ವತ ಕಾಮಗಾರಿ ಕೈಗೊಂಡು ಸರಿಪಡಿಸಬೇಕು .ಅಲ್ಲದೇ ರೈತರ ಜಾನುವಾರುಗಳಿಗೆ ನೀರಿನ ಕೊರತೆ ಎದುರಾಗಿದ್ದು, ಕೂಡಲೇ ಮೇವು ಒದಗಿಸುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.

ಬಳಿಕ ಮಾಜಿ ಸಚಿವ ವಿನಯ ಕುಲಕರ್ಣಿ ಮಾತನಾಡಿ, ಉತ್ತರ ಕರ್ನಾಟ ಭಾಗದಲ್ಲಿ ಅತೀವೃಷ್ಠಿ -ಅನಾವೃಷ್ಠಿ ಸಂಭವಿಸಿ ಸಾಕಷ್ಟು ಹಾನಿಯಾಗಿದೆ. ಆದರೆ ರಾಜ್ಯ ಸರ್ಕಾರ ಬೇಜಾವಾಬ್ದಾರಿತನದಿಂದ ನಡೆದುಕೊಳ್ಳುತ್ತಿದೆ. ಈಗಾಗಲೇ ನೀಡುತ್ತಿರುವ ಪರಿಹಾರ ಯಾವುದಕ್ಕೂ ಸಾಲುತ್ತಿಲ್ಲ. ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೊಡಗು ಮಾದರಿಯಲ್ಲಿ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸೂಕ್ತ ಪರಿಹಾರಕ್ಕಾಗಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಯಿತು

ಪ್ರವಾಹ ಸಂಭವಿಸಿರುವುದು ಗಮನಕ್ಕೆ ಬಂದಿಲ್ಲ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಒಬ್ಬ ಕೇಂದ್ರ ಸಚಿವರಾಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ, ಸಿಎಂ ಯಡಿಯೂರಪ್ಪನವರು ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ಒಂದೊಂದು ಕಡೆ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ.‌ ಕೇಂದ್ರ ಸರ್ಕಾರ ಈ ಕೂಡಲೇ ಹೆಚ್ಚಿನ ಪರಿಹಾರಕ್ಕೆ‌ ಮುಂದಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದರು.

ಶಾಸಕ ಅಮೃತ ದೇಸಾಯಿ ನನ್ನ ಆಸ್ತಿ ಮಾರಿ ಪರಿಹಾರ ಕೊಡುತ್ತೇನೆ ಎಂಬ ಹೇಳಿಕೆ ಬಗ್ಗೆ ಮಾತನಾಡಿ, ಅವರೇನು ಆಸ್ತಿ ಮಾರಿ ಪರಿಹಾರ ಕೊಡುವುದು ಬೇಡ, ಸರ್ಕಾರದ ಬಳಿ ಹಣವಿದೆ ಅದನ್ನು ಕೊಡಿಸಲಿ. ಅದು ಬಿಟ್ಟು ಜನರಿಗೆ ಸುಳ್ಳು ಭರವಸೆ ನೀಡುವುದನ್ನು ಬಿಡಲಿ ಎಂದು ಹೇಳಿದರು.

Intro:ಧಾರವಾಡ: ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಜಿಲ್ಲೆಯ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮಾಜಿ ಸಚಿವ ವಿನಯ ಕುಲಕರ್ಣಿ ನೇತ್ರತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರವಾಹದಲ್ಲಿ ಸಿಲುಕಿ ಮನೆ ಬೆಳೆ ನಷ್ಟ ಅನುಭವಿಸದವರಿಗೆ ಕೂಡಲೇ ಕೊಡಗು ಮಾದರಿಯಲ್ಲಿ ಪರಿಹಾರ ನೀಡಬೇಕು. ಅಲ್ಲದೇ ಸತತ ಬರಗಾಲ ಮತ್ತು ನೆರೆಗೆ ಸಿಲುಕಿದ ರೈತರ ಎಲ್ಲ ಸಾಲಮನ್ನ ಮಾಡಬೇಕು. ರಾಜ್ಯದಲ್ಲಿನ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿದರು.

ಇದೇ ವೇಳೆ ಕೇಂದ್ರ ಹಾಗೂ‌ ರಾಜ್ಯ ಸರಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ನೆರೆಯಿಂದ ಹಾಳಾಗಿರುವ ರಸ್ತೆ ಸೇತುವೆಗಳನ್ನು ಕೂಡಲೇ ದುರಸ್ತಿ ಮಾಡಬೇಕು ಮತ್ತು ಚೆಕ್ ಡ್ಯಾಮ್, ಕೆರೆ ಕಟ್ಟೆಗಳನ್ನು ಶಾಶ್ವತ ಕಾಮಗಾರಿ ಕೈಗೊಂಡು ಸರಿಪಡಿಸಬೇಕು .ಅಲ್ಲದೇ ರೈತರ ಜಾನುವಾರುಗಳಿಗೆ ನೀರಿನ ಕೊರತೆ ಎದುರಾಗಿದ್ದು ಮೇವು ಮಾಡಿ ಕೂಡಲೇ ರೈತರಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಲಾಯಿತು.

ಬಳಿಕ ಸುದ್ದಿಗಾರರೊಂದಿಗೆ ಮಾಜಿ ಸಚಿವ ವಿನಯ ಕುಲಕರ್ಣಿ ಮಾತನಾಡಿ, ಉತ್ತರ ಕರ್ನಾಟ ಭಾಗದಲ್ಲಿ ಅತೀವೃಷ್ಠಿ ಅನಾವೃಷ್ಠಿ ಸಂಭವಿಸಿ ಸಾಕಷ್ಟು ಹಾನಿಯಾಗಿದೆ. ಆದರೆ ರಾಜ್ಯ ಸರ್ಕಾರ ಬೇಜಾವಾಬ್ದಾರಿತನದಿಂದ ನಡೆದುಕೊಳ್ಳುತ್ತಿದೆ. ಈಗಾಗಲೇ ನೀಡುತ್ತಿರುವ ಪರಿಹಾರ ಯಾವುದಕ್ಕೂ ಸಾಲುತ್ತಿಲ್ಲ ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೊಡಗು ಮಾದರಿಯಲ್ಲಿ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.Body:ಪ್ರವಾಹ ಸಂಭವಿಸಿರುವುದು ಗಮನಕ್ಕೆ ಬಂದಿಲ್ಲ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಒಬ್ಬ ಕೇಂದ್ರ ಸಚಿವರಾಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ, ಸಿಎಂ ಯಡಿಯೂರಪ್ಪನವರು ಪ್ರವಾಹದಿಂದಾಗಿರುವ ಹಾನಿ ಕುರಿತು ಒಂದೊಂದು ಕಡೆ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ.‌ ಕೇಂದ್ರ ಸರ್ಕಾರ ಈ ಕೂಡಲೇ ಹೆಚ್ಚಿನ ಪರಿಹಾರಕ್ಕೆ‌ ಮುಂದಾಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಕೈಗೊಳ್ಳಲಾಗುವುದಾಗಿ ಎಚ್ಚರಿಕೆ ನೀಡಿದರು.

ಶಾಸಕ ಅಮೃತ ದೇಸಾಯಿ ನನ್ನ ಆಸ್ತಿ ಮಾರಿ ಪರಿಹಾರ ಕೊಡುತ್ತೇನೆ ಎಂಬ ಹೇಳಿಕೆ ವಿಚಾರಕ್ಕೆ ಮಾತನಾಡಿದ ಅವರು, ಅವ್ರೇನು ಆಸ್ತಿ ಮಾರಿ ಕೊಡೋದು ಬೇಡ ಸರ್ಕಾರದ ಹತ್ತಿರ ಹಣವಿದೆ ಅದನ್ನು ಕೊಡಿಸಲಿ ಅದನ್ನು ಬಿಟ್ಟು ಜನರಿಗೆ ಸುಳ್ಳು ಭರವಸೆ ನೀಡುವುದನ್ನು ಬಿಡಲಿ ಎಂದು ಶಾಸಕ ಅಮೃತ ದೇಸಾಯಿ ಅವರಿಗೆ ಟಾಂಗ್ ನೀಡಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.