ಧಾರವಾಡ: ಪಿಯುಸಿ ಮೌಲ್ಯ ಮಾಪನ ಕೇಂದ್ರಗಳನ್ನು ಪ್ರತಿಯೊಂದು ಜಿಲ್ಲೆಯಲ್ಲಿಯೂ ಆರಂಭಿಸಬೇಕೆಂದು ಆಗ್ರಹಿಸಿ, ರಾಜ್ಯ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಸಂಘದ ವತಿಯಿಂದ ಶಿಕ್ಷಣ ಸಚಿವರಿಗೆ ಮನವಿ ಮಾಡಿಕೊಳ್ಳಲಾಯಿತು.
ಕೊರೊನಾ ವೈರಸ್ ಭೀತಿಯ ಹಿನ್ನೆಲೆ ಪಿಯುಸಿ ವಾರ್ಷಿಕ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರಗಳನ್ನು ಪ್ರತಿ ಜಿಲ್ಲೆಯಲ್ಲಿ ಆರಂಭಿಸಬೇಕು. ಇದರಿಂದ ನಿರಾತಂಕವಾಗಿ ಕೆಲಸ ಮಾಡಲು ಅನುಕೂಲವಾಗುತ್ತದೆ ಎಂದು ಆಗ್ರಹಿಸಿದ್ದಾರೆ.
ದೂರದ ಊರಗೆ ಹೋಗಿ ಮೌಲ್ಯಮಾಪನ ಮಾಡಬೇಕಾಗುತ್ತದೆ. ಅಲ್ಲಿ ಊಟ, ವಸತಿ ಸೇರಿದಂತೆ ಆರೋಗ್ಯ ಸಮಸ್ಯೆಗಳು ಎದುರಾಗುತ್ತವೆ. ಇದರಿಂದ ಬಹಳ ತೊಂದರೆಯಾಗುತ್ತದೆ. ಆದ ಕಾರಣ ಪ್ರತಿ ಜಿಲ್ಲೆಯಲ್ಲಿ ಮೌಲ್ಯಮಾಪನ ಕೇಂದ್ರ ಆರಂಭಿಸಿಬೇಕು ಎಂದು ಒತ್ತಾಯಿಸಿದ್ದಾರೆ.