ಧಾರವಾಡ: ಬಾಲಕಿ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಆರೋಪಿ ಮೇಲೆ ಕೊಲೆ ಪ್ರಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಎಸ್ಪಿ ಸ್ಪಷ್ಟನೆ ನೀಡಿದ್ದಾರೆ.
ಅತ್ಯಾಚಾರ ಆರೋಪಿ ಫಕ್ರುಸಾಬ ನದಾಫ್ನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿರಲಿಲ್ಲ, ಆತನಿಗೆ ಬಾಲಕಿಯ ಮನೆಯವರು ಹೊಡೆದಿದ್ದರಿಂದ ನವಲಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಎಂದು ಧಾರವಾಡದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಹೇಳಿದ್ದಾರೆ.
ಕೃತ್ಯ ಎಸಗಿದ ಬಾಲಕಿಯ ಸಂಬಂಧಿ ಪೊಲೀಸರನ್ನು ತಳ್ಳಿಕೊಂಡು ಹೋಗಿ ಚಾಕುವಿನಿಂದ ಇರಿದಿದ್ದಾನೆ. ಸದ್ಯ ಪ್ರಕರಣದ ತನಿಖೆಗೆ ಡಿ.ಸಿ.ಆರ್.ಬಿ ಡಿ.ವೈ.ಎಸ್.ಪಿ.ಗೆ ನೇಮಿಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಆರೋಪಿ ಸಂತೋಷ್, ಫಕ್ರುಸಾಬ ಮೇಲೆ 5 ಬಾರಿ ಚಾಕುವಿನಿಂದ ಇರಿದಿದ್ದಾನೆ. ಆರೋಪಿ ಸಂತೋಷನನ್ನು ನ್ಯಾಯಾಂಗ ಬಂಧನಕ್ಕೆ ಕೊಡಲಾಗಿದೆ ಎಂದು ತಿಳಿಸಿದ್ರು.
ಇನ್ನು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರ ವಶಕ್ಕೆ ನೀಡುವ ವೇಳೆ ಪೊಲೀಸರ ಸುಪರ್ದಿಯಲ್ಲೇ ಬಾಲಕಿಯ ಸಂಬಂಧಿಯೊಬ್ಬ ಆರೋಪಿಗೆ ಚಾಕು ಇರಿದಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು