ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಸಮುದಾಯಕ್ಕೆ ಕೊರೊನಾ ಹರಡಿದೆ ಎಂಬ ಆತಂಕ ಹೆಚ್ಚಾಗಿದೆ. ಇದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಸಮುದಾಯಕ್ಕೆ ಕೊರೊನಾ ಹರಡುತ್ತಿದೆ ಎಂಬುದನ್ನು ಎಸ್ಪಿ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಿಂದ ಬಂದ ಮಗಳನ್ನು ಕರೆತಂದ ತಂದೆಯಿಂದ ಮೊರಬದಲ್ಲಿ ಕೊರೊನಾ ವೈರಸ್ ಹರಡಿದ್ದು, ಇದರಿಂದ ಗ್ರಾಮದಲ್ಲಿ 30ಕ್ಕೂ ಹೆಚ್ಚು ಜನರಿಗೆ ವೈರಸ್ ಅಂಟಿಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು 274 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿವೆ ಎಂದರು.
ಲಾಕ್ಡೌನ್ ಸಡಿಲಿಕೆಯಾದ ಬೆನ್ನಲ್ಲೇ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ. ಮೊರಬದ ಸೀಲ್ ಡೌನ್ ಏರಿಯಾದಿಂದ ಯಾರನ್ನೂ ಹೊರಗೆ ಬಿಡುತ್ತಿಲ್ಲ. ಅಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಳಿದ ಕಡೆಗಳಲ್ಲಿ ಸಮುದಾಯಕ್ಕೆ ಕೊರೊನಾ ಹರಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.