ಧಾರವಾಡ: ಸಂಚಾರ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ರಾಜು ಕಟಗಿ ಎಂಬುವವರು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಸ್ಕಿಡ್ ಆದ ಹಿನ್ನೆಲೆ ಗಂಭೀರವಾಗಿ ಗಾಯಗೊಂಡು ಸಾವಿಗೀಡಾಗಿದ್ದಾರೆ.
ಅಪಘಾತಕ್ಕೀಡಾದ ಕೂಡಲೇ ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದಾರೆ.
1994 ರ ಬ್ಯಾಚಿನ ರಾಜೇಶ ಕಟಗಿ ಅಗಲಿಕೆಯಿಂದಾಗಿ ಧಾರವಾಡದ ಸಂಚಾರ ಠಾಣೆಯಲ್ಲಿ ನೀರವ ಮೌನ ಆವರಿಸಿದಂತಾಗಿದೆ. ರಾಜೇಶ್ ಅವರು ಇಬ್ಬರು ಹೆಣ್ಣು ಮಕ್ಕಳು ಮತ್ತು ಅದೇ ಠಾಣೆಯಲ್ಲಿ ಎಎಸ್ಐ ಆಗಿ ಕೆಲಸ ಮಾಡುತ್ತಿದ್ದ ಪತ್ನಿಯನ್ನು ಅಗಲಿದ್ದಾರೆ.