ETV Bharat / state

ಧಾರವಾಡ ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ - undefined

ಧಾರವಾಡ ಬಹು ಮಹಡಿ ಕಟ್ಟಡ ಕುಸಿತ ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಡಿಸಿ ತಿಳಿಸಿದರು.

ಧಾರವಾಡ ಬಹು ಮಹಡಿ ಕಟ್ಟಡ ಕುಸಿತ
author img

By

Published : Mar 22, 2019, 11:59 AM IST

ಧಾರವಾಡ: ಇಲ್ಲಿನ ಕುಮಾರೇಶ್ವರ ನಗರದಲ್ಲಿ ಮಂಗಳವಾರ ಕುಸಿತಗೊಂಡ ಕಟ್ಟಡದ ಅವಶೇಷಗಳಡಿ ಸಿಲುಕಿ ಮೃತಪಟ್ಟಿರುವ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗುವುದು ಎಂದು‌ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಈವರೆಗೆ 15 ಮೃತ ದೇಹಗಳು ದೊರೆತಿವೆ. ಅವರ ಕುಟುಂಬದವರಿಗೆ ಪರಿಹಾರದ ಚೆಕ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಗಾಯಾಳುಗಳಿಗೆ ಹಾಗೂ ಮೃತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ಒದಗಿಸಲು ಕೋರಿ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ.

4 ದಿನ ಹೋರಾಡಿ ಬದುಕಿ ಬಂದ ಯುವಕ:

4 ದಿನ ಜೀವನ್ಮರಣದ ಮಧ್ಯೆ ಹೋರಾಟ ನಡೆಸಿದ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಿಕ್ಕುಳಗೇರಿ ಗ್ರಾಮದ ಯುವಕ ಸೋಮು ರಾಮನಗೌಡರ (24) ಜೀವಂತವಾಗಿ ಹೊರ ಬಂದಿದ್ದಾನೆ. ಈತ ಜೆಡಿಎಸ್ ಕಚೇರಿಯಲ್ಲಿ ಆಫೀಸ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

Intro:ನಾಳೆ ಮಧ್ಯಾಹ್ನದೊಳಗೆ ಜೆಡಿಎಸ್ ಅಭ್ಯರ್ಥಿಯ ನಾಮಪತ್ರ: ಎಚ್.ಡಿ.ರೇವಣ್ಣ

ಹಾಸನ: ನಾಳೆ ಮಧ್ಯಾಹ್ನ 1 ಗಂಟೆಯೊಳಗೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವರು ಎಂದು ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು.
ನಗರದ ಜ್ಞಾನಾಕ್ಷಿ ಕಲ್ಯಾಣ ಮಂಟಪದಲ್ಲಿ
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾಮಪತ್ರ ಸಲ್ಲಿಕೆಗೂ ಮೊದಲು ಹೊಳೆನರಸೀಪುರದ  ತಾಲೂಕಿನ ಹರದನಹಳ್ಳಿಯ ಲಕ್ಷ್ಮೀನರಸಿಂಹಸ್ವಾಮಿ, ಈಶ್ವರ ದೇವಾಲಯ ಹಾಗೂ ಮಾವಿನಕೆರೆ ಬೆಟ್ಟದ ರಂಗನಾಥಸ್ವಾಮಿ ದೇವಾಲಯಗಳಿಗೆ ಪೂಜೆ ಸಲ್ಲಿಸಿ ಮಧ್ಯಾಹ್ನ 1 ಗಂಟೆಯೊಳಗೆ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಮೆರವಣಿ ಮೂಲಕ ನಾಮಪತ್ರ ಸಲ್ಲಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಕೋಮುವಾದಿಗಳನ್ನು ದೂರವಿಡಲು
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ.ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸುವರು. ಸಧ್ಯದಲ್ಲೆ ಕಾಂಗ್ರೆಸ್ ಮುಖಂಡರಾದ ಬಿ.ಶಿವರಾಂ, ಸಿ.ಎಸ್.ಪುಟ್ಟೇಗೌಡ, ಜಾವಗಲ್ ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಸೇರಿದಂತೆ ಮುಖಂಡರ  ಸಭೆ ಕರೆಯುವೆ.ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು ಎಂದರು.
ಬಿಜೆಪಿ ಸಂಭವನೀಯ ಅಭ್ಯರ್ಥಿ ಎ.ಮಂಜು ಜಿಲ್ಲೆಯಲ್ಲಿ ನಾನು ಚುನಾವಣೆಗೆ ಸ್ಪರ್ಧಿಸಿದ ನಂತರ ಜೆಡಿಎಸ್ ನವರು ಎಲ್ಲರ ಮನೆ ಬಾಗಿಲಿಗೆ ಹೋಗಿ ಕೈ ಮುಗಿಯುತ್ತಿದ್ದಾರೆ ಎಂಬ ಪ್ರಶ್ನೆಗೆ ಅವರ ಆರೋಪದ ಬಗ್ಗೆ ಮಾತಾಡೋಕೆ ಹೋದ್ರೆ ನಾನು ಪೊಳ್ಳೆದ್ದು ಹೋಗ್ತಿವೆ.ನಮಗೆ ಜಿಲ್ಲೆಯ ಅಭಿವೃದ್ಧಿ ಮುಖ್ಯ.ದೇವರ ಮತ್ತು ಜಿಲ್ಲೆಯ ಜನತೆಯ ಆಶೀರ್ವಾದ ಇರೊವರೆಗೆ ಯಾವುದೇ ತೊಂದರೆ ಆಗಲ್ಲ ಎಂದರು.
ಜಿಲ್ಲೆಯಲ್ಲಿ ಜೆಡಿಎಸ್ ಬಗ್ಗೆ ಉತ್ತಮ ಒಲವಿದೆ. ಈಗಾಗಲೇ ಸಿಎಂ ಕುಮಾರಸ್ವಾಮಿ ಅವರು ಸಹಕಾರಿ ಹಾಗೂ ರಾಷ್ತ್ರೀಕೃತ ‌ ಬ್ಯಾಂಕುಗಳ ಸಾಲಮನ್ನಾ ಮಾಡಿದ್ದಾರೆ.ಆಂತರಿಕವಾಗಿ ಚಿಕ್ಕ,ಪುಟ್ಟ ಗೊಂದಲಗಳಿದ್ದರೂ ಅವುಗಳೆಲ್ಲವನ್ನು ಸರಿಪಡಿಸಿಕೊಂಡು ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಹಾಸನ.

Body:0

Conclusion:0

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.