ಧಾರವಾಡ: ಜಿ.ಪಂ. ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣ ಸಿಬಿಐ ತನಿಖೆ ತೀವ್ರಗೊಂಡಿದೆ. ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿರುವ ಸಿಬಿಐ ವಿಚಾರಣೆಗೆ ಇಂದು ಪ್ರಮುಖರು ವಿಚಾರಣೆಗೆ ಆಗಮಿಸಿದ್ದಾರೆ.
ಕೊಲೆ ನಡೆದ ವೇಳೆ ಕಪ್ಪು ಬಣ್ಣದ ಕಾರು ಬಳಕೆಯಾಗಿದ್ದು ಪತ್ತೆಯಾಗಿತ್ತು. ಆ ಕಾರು ಚಂದ್ರು ಪೂಜಾರ್‌ಗೆ ಸೇರಿದ್ದು ಎನ್ನಲಾಗಿತ್ತು. ಆ ಹಿನ್ನೆಲೆಯಲ್ಲಿ ಚಂದ್ರು ಪೂಜಾರ್‌ನನ್ನು ಸಿಬಿಐ ವಿಚಾರಣೆಗೆ ಕರೆಸಿಕೊಂಡಿದೆ. ಒಟ್ಟಿನಲ್ಲಿ ಈಗಾಗಲೇ ಮಾಜಿ ಸಚಿವ ವಿನಯ್ ಕುಲಕರ್ಣಿ ಹಾಗೂ ಅವರ ಸಹೋದರ ವಿಜಯ್ ಕುಲಕರ್ಣಿ ಸೇರಿದಂತೆ ಹಲವರನ್ನು ಸಿಬಿಐ ವಿಚಾರಣೆಗೊಳಪಡಿಸಿದೆ. ಆ ಹಿನ್ನೆಲೆ ಯೋಗೇಶ್‌ಗೌಡ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದು ಕೊಳ್ಳುತ್ತಿದೆ.