ಹುಬ್ಬಳ್ಳಿ: ಶಿಕ್ಷಕರಿಗೆ ಮಾರಕವಾದ ವಿದ್ಯಾಗಮ ಯೋಜನೆಯ ಸಾಧಕ-ಬಾಧಕ, ಶಿಕ್ಷಣ ಇಲಾಖೆಯಲ್ಲಿ ಅವೈಜ್ಞಾನಿಕ ಯೋಜನೆ ಜಾರಿ, ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ಬೇಡಿಕೆ ಸೇರಿದಂತೆ ಮುಂತಾದ ವಿಷಯಗಳ ಕುರಿತು ಸೆ.21ರಿಂದ ನಡೆಯಲಿರುವ ಅಧಿವೇಶನದಲ್ಲಿ ಸುದೀರ್ಘ ಚರ್ಚೆಗೆ ಒತ್ತಾಯಿಸುತ್ತೇನೆಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುನಿರೀಕ್ಷಿತ ಮುಂಗಾರು ಅಧಿವೇಶನ ಸೆಪ್ಟೆಂಬರ್ 21ರಂದು ಆರಂಭವಾಗಲಿದ್ದು, ಖಾಸಗಿ, ಅನುದಾನಿತ ಶಿಕ್ಷಣ ಸಂಸ್ಥೆಗಳು ಎದುರುಸುತ್ತಿರುವ ಸಮಸ್ಯೆ, ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಾಗೂ ಈ ಭಾಗದಲ್ಲಿ ನೆನೆಗುದಿಗೆ ಬಿದ್ದಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಜಾರಿ ಕುರಿತು ಧ್ವನಿ ಎತ್ತಲಾಗುವುದು ಎಂದರು.
ಇನ್ನು, ಉತ್ತರ ಕರ್ನಾಟಕ ಭಾಗದಲ್ಲಿ ಕೇಲ ಕಚೇರಿ ಸ್ಥಳಾಂತರ ಕುರಿತಾದ ಬೇಡಿಕೆ ಮುಂತಾದ ಸಮಸ್ಯೆ, ವಿಷಯ ಮಂಡನೆ ಕುರಿತಾಗಿ ಈಗಾಗಲೇ ನಮ್ಮ ನಾಯಕರ ಜೊತೆ ಚರ್ಚೆ ಮಾಡಿದ್ದು ಸದನದಲ್ಲಿ ಒಗ್ಗಟ್ಟು ಪ್ರದರ್ಶಿಸಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಒತ್ತು ನೀಡುವಂತೆ ಆಗ್ರಹಿಸಲಾಗುವುದು ಎಂದರು.