ಹುಬ್ಬಳ್ಳಿ : ಕೋವಿಡ್-19 ಸಾಂಕ್ರಾಮಿಕ ಸೋಂಕಿತ ಪ್ರದೇಶದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಹುಬ್ಬಳ್ಳಿ- ಧಾರವಾಡ ಪಾಲಿಕೆ ಪೌರ ಕಾರ್ಮಿಕರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆರ್ಸೆನಿಕಂ ಆಲ್ಬಮ್-30 ಮಾತ್ರೆ ವಿತರಿಸಲಾಯಿತು.
ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಜಿಲ್ಲಾ ಆಯುಷ್ಯ ಇಲಾಖೆ, ಡಾ. ಬಿ ಡಿ ಜತ್ತಿ ಹೋಮಿಯೋಪತಿ ಮೆಡಿಕಲ್ ಕಾಲೇಜು, ಆಯುಷ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಪಾಲಿಕೆ ಸಹಯೋಗದಲ್ಲಿ ಆರ್ಸೆನಿಕಂ ಆಲ್ಬಮ್ -30 ಹೊಮಿಯೋಪತಿ ಮಾತ್ರೆಗಳನ್ನು ಉಚಿತವಾಗಿ ನೀಡಿ, ಸೇವಿಸುವ ವಿಧಾನಗಳನ್ನು ತಿಳಿಸಿಕೊಡಲಾಯಿತು.
ಈ ವೇಳೆ ಪಾಲಿಕೆ ಆಯುಕ್ತ ಸುರೇಶ್ ಇಟ್ನಾಳ್ ಮಾತನಾಡಿ, ಪೌರ ಕಾರ್ಮಿಕರು ಆರ್ಸೆನಿಕಂ ಆಲ್ಬಮ್ -30 ಮಾತ್ರೆಗಳನ್ನು ಸೇವಿಸಿದ್ದೇವೆ ಎನ್ನುವ ಕಾರಣಕ್ಕೆ ಮೈಮರೆಯುವ ಹಾಗಿಲ್ಲ. ಕೆಲಸದ ಸಮಯದಲ್ಲಿ ಕಡ್ಡಾಯವಾಗಿ ಮಾಸ್ಕ್, ಹ್ಯಾಂಡ್ ಗ್ಲೌಸ್, ಶೂ ಬಳಸಬೇಕು. ಸ್ಯಾನಿಟೇಸರ್ ಮೂಲಕ ಕೈತೊಳೆಯಬೇಕು. ವಲಯ ಅಧಿಕಾರಿಗಳು ಪೌರ ಕಾರ್ಮಿಕರಿಗೆ ಮಾತ್ರೆ ನೀಡಿ ಅವರು ಸೇವಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.