ETV Bharat / state

ಇನ್ಫೋಸಿಸ್ ಪ್ರತಿಷ್ಠಾನದಿಂದ 220 ಕ್ಕೂ ಅಧಿಕ ಕಾರ್ಮಿಕರಿಗೆ ಆಹಾರ ಕಿಟ್ - ಇನ್ಫೋಸಿಸ್ ಪ್ರತಿಷ್ಠಾನದಿಂದ ಆಹಾರ ಕಿಟ್ ವಿತರಣೆ

ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಆಹಾರ ನಿಗಮ (ಕೆಎಸ್​ಸಿಎಫ್​ಸಿ ) 8 ಗೋದಾಮುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 220 ಕ್ಕೂ ಹೆಚ್ಚು ಕಾರ್ಮಿಕರಿಗೆ ಇನ್ಫೋಸಿಸ್ ಪ್ರತಿಷ್ಠಾನದಿಂದ ಆಹಾರ ಧಾನ್ಯಗಳ ಕಿಟ್​ಗಳನ್ನು ವಿತರಿಸಲಾಯಿತು.

Infosys Foundation  food kit Distribution
ಇನ್ಫೋಸಿಸ್ ಪ್ರತಿಷ್ಠಾನದಿಂದ 220 ಕ್ಕೂ ಅಧಿಕ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
author img

By

Published : Apr 12, 2020, 6:10 PM IST

ಹುಬ್ಬಳ್ಳಿ: ಇನ್ಫೋಸಿಸ್ ಪ್ರತಿಷ್ಠಾನ ನೀಡಿರುವ ಆಹಾರ ಧಾನ್ಯಗಳ ಕಿಟ್​ಗಳನ್ನು ಇಸ್ಕಾನ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಸಹಯೋಗದಲ್ಲಿ ಇಂದು ಸುಮಾರು 220 ಕ್ಕೂ ಹೆಚ್ಚು ಕಾರ್ಮಿಕರಿಗೆ ವಿತರಿಸಲಾಯಿತು.

Infosys Foundation  food kit Distribution
ಇನ್ಫೋಸಿಸ್ ಪ್ರತಿಷ್ಠಾನದಿಂದ 220 ಕ್ಕೂ ಅಧಿಕ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
Infosys Foundation  food kit Distribution
ಇನ್ಫೋಸಿಸ್ ಪ್ರತಿಷ್ಠಾನದಿಂದ 220 ಕ್ಕೂ ಅಧಿಕ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ
ನಗರದಲ್ಲಿನ ಕರ್ನಾಟಕ ರಾಜ್ಯ ಆಹಾರ ನಿಗಮ (ಕೆಎಸ್​ಸಿಎಫ್​ಸಿ ) 8 ಗೋದಾಮುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 220 ಕ್ಕೂ ಹೆಚ್ಚು ಕಾರ್ಮಿಕರು, ಲಾರಿ ಚಾಲಕರು ಹಾಗೂ ಕ್ಲೀನರ್​ಗಳಿಗೆ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ ಮರ್ಜಿ ಹಾಗೂ ಇಸ್ಕಾನ್​ನ ಸಾಯಿನಾಥ್ ಕಿಟ್​ಗಳನ್ನು ವಿತರಿಸಿದರು.
5 ಕೆ.ಜಿ.ಅಕ್ಕಿ, ಅಡುಗೆ ಎಣ್ಣೆ, ತೊಗರಿ ಬೇಳೆ ಸೇರಿದಂತೆ ಸುಮಾರು 17 ಆಹಾರ ಪದಾರ್ಥಗಳನ್ನು ಒಳಗೊಂಡಿರುವ ಈ ಕಿಟ್ 750 ರೂ.ಮೌಲ್ಯದ್ದಾಗಿದೆ.ಅಲ್ಲದೇ ಕಲಘಟಗಿಯ ಜಾತ್ರೆಯಲ್ಲಿ ಬಿಡಾರ ಹೂಡಿ ಈಗ ಲಾಕ್ ಡೌನ್ ನಿಂದ ಸಂಕಷ್ಟ ಎದುರಿಸುತ್ತಿರುವ ವೃತ್ತಿ ನಾಟಕ ಕಂಪನಿಯ ಕಲಾವಿದರಿಗೂ ಈ ಆಹಾರ ಧಾನ್ಯದ ಕಿಟ್ ಪೂರೈಸಲು ವ್ಯವಸ್ಥೆ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.