ಹುಬ್ಬಳ್ಳಿ: ಕೊರೊನಾ ವೈರಸ್ ತಡೆ ಹಿನ್ನಲೆಯಲ್ಲಿ ಲಾಕ್ಡೌನ್ ಘೋಷಣೆಯಾಗಿದ್ದು, ನಿರಾಶ್ರಿತರು ಹಾಗೂ ನಿರ್ಗತಿಕರು ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಈ ಹಿನ್ನಲೆಯಲ್ಲಿ ನಗರದ ಕೇಬಲ್ ಸಂಸ್ಥೆಯ ಸದಸ್ಯರು ನಿರಾಶ್ರಿತರಿಗೆ ಆಹಾರ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.
ಬಿಆರ್ಡಿಎಸ್ ಸಂಸ್ಥೆ ಸಿಬ್ಬಂದಿ ರಾತ್ರಿ ಹುಬ್ಬಳ್ಳಿಯ ಕಿಮ್ಸ್ ಹಾಗೂ ರೈಲ್ವೆ ನಿಲ್ದಾಣದ ಬಳಿ ಇರುವ ಎರಡು ನೂರಕ್ಕೂ ಹೆಚ್ಚು ಜನರಿಗೆ ಆಹಾರ ಹಾಗೂ ನೀರನ್ನು ವಿತರಣೆ ಮಾಡಿದರು. ಆಹಾರ ವಿತರಣೆ ಮಾಡುವ ಪೂರ್ವದಲ್ಲಿ ಹ್ಯಾಂಡ್ ವಾಷ್ ಮಾಡಿಸುವ ಮೂಲಕ ಆರೋಗ್ಯದ ಬಗ್ಗೆ ಜಾಗೃತಿಯನ್ನೂ ಮೂಡಿಸಿದ್ದಾರೆ.