ಹುಬ್ಬಳ್ಳಿ: ಶ್ರೀ ಜನ ಕಲ್ಯಾಣ ಶಿಕ್ಷಣ ಮತ್ತು ಆರೋಗ್ಯ ಸೇವಾ ಸಂಸ್ಥೆಯಿಂದ ಟ್ರಾಫಿಕ್ ಪೊಲೀಸ್ ಹಾಗೂ ಪಾಲಿಕೆ ಕಾರ್ಮಿಕರರಿಗೆ ಹ್ಯಾಂಡ್ ಗ್ಲೌಸ್ ಹಾಗೂ ಸ್ಯಾನಿಟೈಜರ್ ಉಚಿತ ವಿತರಣೆ ಮಾಡಲಾಯಿತು.
ಚೆನ್ನಮ್ಮ ವೃತ್ತ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಹ್ಯಾಂಡ್ಗ್ಲೌಸ್, ಮಾಸ್ಕ್, ಸ್ಯಾನಿಟೈಜರ್ ವಿತರಿಸಲಾಯಿತು. ಆ ನಂತರ ಸಾರ್ವಜನಿಕರ ರಕ್ಷಣೆಗಾಗಿ ದುಡಿಯುತ್ತಿರುವ ಸಿಬ್ಬಂದಿಯ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಮನವಿ ಮಾಡಲಾಯಿತು.