ETV Bharat / state

ನಾಡೋಜ ಪಾಟೀಲ ಪುಟ್ಟಪ್ಪ ನಿಧನ: ಹುಟ್ಟೂರಿನಲ್ಲಿಂದು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ - ಜಿಲ್ಲಾಧಿಕಾರಿ ದೀಪಾ ಚೋಳನ್

ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿರುವ ನಾಡೋಜ್​ ಪಾಟೀಲ​ ಪುಟ್ಟಪ್ಪ ಅವರ ಅಂತ್ಯಕ್ರಿಯೆ ಇಂದು ಹಾವೇರಿಯ ಹಲಗೇರಿಯಲ್ಲಿ ನಡೆಯಲಿದೆ.

deepa-cholan
ದೀಪಾ ಚೋಳನ್
author img

By

Published : Mar 17, 2020, 1:12 AM IST

ಹುಬ್ಬಳ್ಳಿ: ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಸ್ವಗೃಹದಲ್ಲಿ ಬೆಳಗ್ಗೆ 9ರಿಂದ 1ರವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್​ ತಿಳಿಸಿದ್ದಾರೆ.

ದೀಪಾ ಚೋಳನ್

ಅಂತಿಮ ದರ್ಶನದ ನಂತರ ತಾಲೂಕಿನ ಹಲಗೇರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧಾರ ತಗೆದುಕೊಂಡಿದ್ದಾರೆ‌. ಸರ್ಕಾರಿ ಗೌರವದೊಂದಿಗೆ ಸಂಜೆ 5 ಗಂಟೆಗೆ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದರು.

ರಕ್ತದೊತ್ತಡ, ಉಸಿರಾಟದ ತೊಂದರೆ ಸೇರಿದಂತೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಫೆ.10ರಿಂದ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ(ಕಿಮ್ಸ್​​) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ನಿನ್ನೆ ರಾತ್ರಿ 10.10ಕ್ಕೆ ನಿಧನರಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.