ETV Bharat / state

ಧಾರವಾಡದಲ್ಲಿ ಕೊರೊನಾ ವರದಿಯಾಗಿಲ್ಲ, ಸಾರ್ವಜನಿಕರು ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ - ​ ETV Bharat Karnataka

ಕೊರೊನಾ ಲಕ್ಷಣಗಳು ಕಂಡುಬಂದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳುವಂತೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
author img

By ETV Bharat Karnataka Team

Published : Dec 20, 2023, 10:54 PM IST

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಯಾವುದೇ ಸ್ವರೂಪದ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಸಾರ್ವಜನಿಕರು ಕೊರೊನಾ ಬಗ್ಗೆ ಗಾಬರಿಪಡದೇ ಆರೋಗ್ಯ ಸುರಕ್ಷತೆಗಾಗಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಕೋವಿಡ್ 19 ರ ಅಂಕಿಅಂಶಗಳು, ಕೇರಳದಲ್ಲಿನ ಕೋವಿಡ್-19 ಪ್ರಕರಣಗಳ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್-19 ರ ಉಪತಳಿ ಜೆಎನ್.1 (JN.1) ವರದಿ, ಚಳಿಗಾಲದ ಹವಾಮಾನ, ಕ್ರಿಸ್​ಮಸ್ ಹಾಗೂ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆಯನ್ನು ಗಮನದಲ್ಲಿರಿಸಿಕೊಂಡು ಕೆಲವು ಸಲಹಾತ್ಮಕ ಮಾರ್ಗಸೂಚಿಗಳನ್ನು ಶಿಫಾರಸು ಮಾಡಿದೆ. ಈ ಅಂಶಗಳನ್ನು ಜಿಲ್ಲೆಯ ಸಾರ್ವಜನಿಕರು ಸಹ ಪಾಲಿಸುವಂತೆ ಸೂಚನೆ ನೀಡಿದ್ದಾರೆ.

  • 60 ವರ್ಷ ಹಾಗೂ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು, ವಿಶೇಷವಾಗಿ ಕಿಡ್ನಿ, ಹೃದಯ, ಲೀವರ್ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು ಜನದಟ್ಟಣೆ, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು.
  • ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆ ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು.
  • ಉತ್ತಮ ವೈಯಕ್ತಿಕ ಸ್ವಚ್ಚತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಮುಂಗೃತೆಯ ಪಾಲನೆ ಅಗತ್ಯ.
  • ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರಿಕರು, ದುರ್ಬಲರನ್ನು (Vulnerable) ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡಬೇಕು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು ಮಾಸ್ಕ್ ಧರಿಸುಬೇಕು. ಅಂತರರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗೃತಾ ಕ್ರಮಗಳು: ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣಕ್ಕಾಗಿ ಎಲ್ಲ ಅಗತ್ಯ ಕ್ರಮಗಳನ್ನು ಕೈಕೊಳ್ಳಲಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ, ಧಾರವಾಡ ಜಿಲ್ಲಾ ಆಸ್ಪತ್ರೆ ಮತ್ತು ಕಲಘಟಗಿ, ನವಲಗುಂದ ಮತ್ತು ಕುಂದಗೋಳ ತಾಲೂಕಾ ಆಸ್ಪತ್ರೆಗಳಲ್ಲಿ ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಚಿಕಿತ್ಸೆಗಾಗಿ ವಿವಿಧ ಆಸ್ಪತೆಗಳಲ್ಲಿ ಒಟ್ಟು 5,450 ಹಾಸಿಗೆಗಳು ಲಭ್ಯವಿವೆ. 1,666 ಆಕ್ಸಿಜನ್ ಹಾಸಿಗೆಗಳು, 565 ಐಸಿಯು ಹಾಸಿಗೆಗಳು, 205 ವೆಂಟಿಲೇಟರ್ಸ್ ಹಾಸಿಗೆಗಳು, 500 ಆಕ್ಸಿಜನ್ ಕಾನಸೆಂಟ್ರೇಟರ್ಸ್, 1,307 ಆಕ್ಷಿಜನ್ ಸಿಲಿಂಡರ್‌ಗಳು, 15 ಪಿಎಸ್​ಎ ಪ್ಲ್ಯಾಂಟ್‍ಗಳು ಹಾಗೂ 21 ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಸ್ಟೋರೆಜ್ ಟ್ಯಾಂಕ್‍ಗಳು ಲಭ್ಯವಿದ್ದು, ಎಲ್ಲಾ ಸುಸ್ಥಿತಿಯಲ್ಲಿವೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ ಮತ್ತು ಧಾರವಾಡದ ಡಿಮ್ಹಾನ್ಸ್ ಆಸ್ಪತ್ರೆಯಲ್ಲಿ ಕೋವಿಡ್ 19 ಪರೀಕ್ಷೆ ಕೈಗೊಳ್ಳಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆ ಮುಖ್ಯಸ್ಥರಿಗೆ ಕೂಡಾ ಕೊರೊನಾ ಎದುರಿಸುವ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳೊಂದಿಗೆ ಸನ್ನದ್ಧರಾಗುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಗಡಿಭಾಗದಲ್ಲಿ ಕೊರೊನಾ ತಪಾಸಣೆ ಇಲ್ಲ, ಜಾಗೃತಿಗೆ ಜಿಲ್ಲಾಡಳಿತ ನಿರ್ಧಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.