ಹುಬ್ಬಳ್ಳಿ : ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ್ ಇಂದು ಹುಬ್ಬಳ್ಳಿ ತಹಶೀಲ್ದಾರ್ ಕಾರ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿವೆ. ಮಿನಿ ವಿಧಾನಸೌಧಕ್ಕೆ ಆಗಮಿಸುವ ಸಾರ್ವಜನಿಕರ ಸ್ಕ್ರೀನಿಂಗ್ ಕಟ್ಟುನಿಟ್ಟಾಗಿ ಮಾಡಬೇಕು. ಪ್ರತ್ಯೇಕ ವಾಟ್ಸ್ಆ್ಯಪ್ ಸಂಖ್ಯೆಗಳನ್ನು ಬಿಡುಗಡೆ ಮಾಡಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ, ತಕ್ಷಣವೇ ದೂರು ಹಾಗೂ ಮನವಿಗಳಿಗೆ ಸ್ಪಂದಿಸಬೇಕು. ಕಚೇರಿಗಳಿಗೆ ಅನಗತ್ಯವಾಗಿ ಸಾರ್ವಜನಿಕರು ಆಗಮಿಸುವುದು ತಪ್ಪಿಸುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಕೋವಿಡ್-19 ನಿಯಂತ್ರಿಸುವ ಕುರಿತು ಪೊಲೀಸ್ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪವಿಭಾಗಧಿಕಾರಿ ಮಹ್ಮದ್ ಜುಬೇರ್, ಹುಬ್ಬಳ್ಳಿ ನಗರ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಗ್ರಾಮೀಣ ತಹಶೀಲ್ದಾರ್ ಪ್ರಕಾಶ್ ನಾಸಿ ಸೇರಿ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.