ETV Bharat / state

ಮಾಸ್ಕ್ ಅಭಿಯಾನ ಚುರುಕುಗೊಳಿಸಲು ಅಧಿಕಾರಿಗಳಿಗೆ ಡಿಸಿ ನಿತೇಶ ಕೆ. ಪಾಟೀಲ ಆದೇಶ - instruct to speed up the Mask campaign

ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಹೋಗಿದೆ ಎಂದು ಭಾವಿಸಿ ಜನರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಪಾಲನೆ ಮಾಡದೇ ಗುಂಪು ಗೂಡುವುದು, ಸಂಚರಿಸುವುದು ಸಾಮಾನ್ಯವಾಗುತ್ತಿದೆ. ಇದರಿಂದ ಕೊರೊನಾದ ಎರಡನೇ ಅಲೆಗೆ ತುತ್ತಾಗುವ ಸಾಧ್ಯತೆ ಇದೆ. ಹಾಗಾಗಿ ಅಧಿಕಾರಿಗಳು ಜಿಲ್ಲೆಯಲ್ಲಿ ಮಾಸ್ಕ್ ಅಭಿಯಾನವನ್ನು ಚುರುಕುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದರು.

dharwad
ಜಿಲ್ಲಾಧಿಕಾರಿ ನಿತೇಶ ಕೆ. ಪಾಟೀಲ ಆದೇಶ
author img

By

Published : Nov 25, 2020, 2:31 PM IST

ಧಾರವಾಡ: ಕೋವಿಡ್-19 ಇಳಿಮುಖವಾಗಿದೆ ಎಂದು ಭಾವಿಸಿ ಸಾರ್ವಜನಿಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಪಾಲನೆ ಮಾಡದೇ ಸಂಚರಿಸುತ್ತಿದ್ದಾರೆ. ಹೀಗಾಗಿ, ಅಧಿಕಾರಿಗಳು ಜಿಲ್ಲೆಯಲ್ಲಿ ಮಾಸ್ಕ್ ಅಭಿಯಾನವನ್ನು ಚುರುಕುಗೊಳಿಸಿ, ಪ್ರತಿದಿನ ತಪ್ಪದೇ ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗ ವಿಡಿಯೋ ಸಂವಾದ ಜರುಗಿದ ನಂತರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೊರೊನಾ ಹೋಗಿದೆ ಎಂದು ಭಾವಿಸಿ ಜನರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಪಾಲನೆ ಮಾಡದೇ ಗುಂಪು ಗೂಡುವುದು, ಸಂಚರಿಸುವುದು ಸಾಮಾನ್ಯವಾಗುತ್ತಿದೆ. ಈ ರೀತಿಯ ಭಾವನೆ ಹಾಗೂ ವರ್ತನೆಗಳಿಂದ ನಾವು ಕೊರೊನಾದ ಎರಡನೇ ಅಲೆಗೆ ತುತ್ತಾಗುವ ಸಾಧ್ಯತೆ ಇದೆ. ಆದ್ದರಿಂದ ಕೊರೊನಾ ಜಾಗೃತಿ ಹಾಗೂ ಮಾಸ್ಕ್ ಅಭಿಯಾನಕ್ಕಾಗಿ ರಚಿಸಿರುವ ಅಧಿಕಾರಿಗಳ ತಂಡ ಇನ್ನಷ್ಟು ಕ್ರಿಯಾಶೀಲವಾಗಿ ತೊಡಗಿಸಿಕೊಂಡು ಪರಿಣಾಮಕಾರಿಯಾಗಿ ಅಭಿಯಾನ ಜಾರಿಗೊಳಿಸಬೇಕು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಮಾಸ್ಕ್ ಧರಿಸದೆ ಸಂಚರಿಸುವವರಿಗೆ ಸ್ಥಳದಲ್ಲಿಯೇ ರೂ.250 ದಂಡ ವಿಧಿಸಬೇಕು. ದಂಡ ಕಟ್ಟಿದ ವ್ಯಕ್ತಿ ಮಾಸ್ಕ್ ಧರಿಸದೇ ತಪ್ಪನ್ನು ಪುನರಾವರ್ತಿಸಿದರೆ ಮತ್ತೇ ಅದೇ ರೀತಿ ದಂಡ ವಿಧಿಸಬೇಕು. ಈ ಮೂಲಕ ಜನರಿಗೆ ಮಾಸ್ಕ್ ಧರಿಸಿ ಇಲ್ಲಾ ದಂಡ ಕಟ್ಟಿ ಎಂಬ ಕಠಿಣ ಸಂದೇಶವನ್ನು ತಲುಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಪಾಲಿಕೆ ಆಯುಕ್ತರ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಮಾಸ್ಕ್ ಕಾರ್ಯಾಚರಣೆ ಕೈಗೊಳ್ಳಬೇಕು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ನಗರ ಸಂಸ್ಥೆ ಮತ್ತು ಪೊಲೀಸ್ ಸಿಬ್ಬಂದಿ ಸಹಯೋಗದಲ್ಲಿ ಮಾಸ್ಕ್ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಈ ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.