ಹುಬ್ಬಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ ಪೊಲೀಸ್ ಸಿಬ್ಬಂದಿಗೆ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯೊಬ್ಬರು ಕಿಡ್ನಿ ಸ್ಟೋನ್ ಸಮಸ್ಯೆಯಿಂದ ನರಳುತ್ತಿದ್ದರು. ಶಕುಂತಲಾ ಮೆಮೋರಿಯಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿದ್ದರು. ಆದರೆ, ಚಿಕಿತ್ಸೆ ನೀಡಲು ವೈದ್ಯರು ನಿರಾಕರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಕರ್ತವ್ಯ ನಿರ್ವಹಿಸುವಾಗಲೇ ತೊಂದರೆಯಾಗಿ ಆಸ್ಪತ್ರೆಗೆ ಬಂದರೂ ಚಿಕಿತ್ಸೆ ನೀಡಲು ವೈದ್ಯರು ಹಿಂದೇಟು ಹಾಕಿದ್ದಾರೆ. ಇದರಿಂದಾಗಿ ಚಿಕಿತ್ಸೆಗಾಗಿ ಪೊಲೀಸ್ ಸಿಬ್ಬಂದಿ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ವೈದ್ಯರ ಈ ನಡೆಗೆ ತೀವ್ರ ಟೀಕೆ ವ್ಯಕ್ತವಾಗಿದೆ.