ಹುಬ್ಬಳ್ಳಿ: ನಗರದಲ್ಲಿ ಮಧ್ಯರಾತ್ರಿ ನೆತ್ತರು ಹರಿದಿದೆ. ಡಬಲ್ ಮರ್ಡರ್ಗೆ ಹುಬ್ಬಳ್ಳಿಯ ಜನರು ಬೆಚ್ಚಿ ಬಿದ್ದಿದ್ದಾರೆ.
ಇಬ್ಬರು ಯುವಕರನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಗೋಪನಕೊಪ್ಪ ಬಸ್ ಸ್ಟಾಪ್ನಲ್ಲಿ ನಡೆದಿದೆ. ಕೊಲೆಯಾದ ಯುವಕರನ್ನು ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಎಂದು ಗುರುತಿಸಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದು, ಹಳೇ ವೈಷಮ್ಯವೇ ಘಟನೆಗೆ ಕಾರಣ ಎನ್ನಲಾಗಿದೆ.
ಈ ಸಂಬಂಧ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.