ಹುಬ್ಬಳ್ಳಿ: ಕುಡಿದ ಅಮಲಿನಲ್ಲಿ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ತಾನು ವಾಸವಿದ್ದ ಹಾಸ್ಟೆಲ್ನ ಎರಡನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಕಿಮ್ಸ್ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಪುನೀತ್ ಎಂಬ ವಿದ್ಯಾರ್ಥಿ ಕುಡಿದ ಮತ್ತಿನಲ್ಲಿ ಕಿಮ್ಸ್ ಆವರಣದಲ್ಲಿನ ಆನಂದ ಹಾಸ್ಟೆಲ್ನ ಎರಡನೆಯ ಮಹಡಿಯಿಂದ ಬಿದ್ದಿದ್ದಾನೆ.
ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸುವ ಸಲುವಾಗಿ ವೈದ್ಯರು ಸಮಾಲೋಚನೆ ನಡೆಸುತ್ತಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.