ಧಾರವಾಡ: ನಗರದಲ್ಲಿ ಎಟಿಎಂ ಸೆಕ್ಯೂರಿಟಿ ಗಾರ್ಡ್ವೋರ್ವ ಆತಂಕ ಸೃಷ್ಟಿಸಿದ್ದ. ಎಣ್ಣೆ ಕುಡಿದು ಫುಲ್ ಟೈಟ್ ಆಗಿದ್ದ ಕೈಯಲ್ಲಿ ಗನ್ ಹಿಡಿದು ಕುಳಿತಿರೋದನ್ನು ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದರು.
ನಗರದ ಕರ್ನಾಟಕ ಕಾಲೇಜ್ ಎದುರು ಸೆಕ್ಯೂರಿಟಿ ಗಾರ್ಡ್ನಿಂದ ಈ ಹೈಡ್ರಾಮಾ ನಡೆದಿದೆ.
ನಗರದ ಶ್ರೀನಗರ ಬಡಾವಣೆಯ ನಿವಾಸಿ ಬಾಳಪ್ಪ ಎಂಬಾತ ಎಟಿಎಂ ಸೆಕ್ಯೂರಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಈತ ಕುಡಿದ ಮತ್ತಿನಲ್ಲಿ ಕೈಯಲ್ಲಿ ಗನ್ ಹಿಡಿದು ಕುಳಿತದ್ದನ್ನು ಕಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಉಪನಗರ ಠಾಣೆಯ ಪೊಲೀಸರು ಬಾಳಪ್ಪನನ್ನು ವಶಕ್ಕೆ ಪಡೆದು, ಠಾಣೆಗೆ ಕರೆದೊಯ್ದರು.