ಧಾರವಾಡ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿವೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಾಡ ಗ್ರಾಮದಲ್ಲಿ ನಡೆದಿದೆ.
ಬಸವರಾಜ ಬಿಂಗಿ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ನಿನ್ನೆ ತಡರಾತ್ರಿ ಈತ ಕುಡಿದ ಅಮಲಿನಲ್ಲಿ ಗ್ರಾಮದ ಹೊರವಲಯದಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ಈಗ ನೇಣು ಹಾಕಿಕೊಂಡ ಹಗ್ಗ ತುಂಡಾಗಿ ಮರದ ಬುಡದಲ್ಲಿ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ.
ಸ್ಥಳೀಯರ ಮಾಹಿತಿ ಮೇರೆಗೆ ಧಾರವಾಡ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ.