ಧಾರವಾಡ: ಕೊರೊನಾ ವೈರಸ್ ಹರಡುವ ಭೀತಿಯಿಂದ ಧಾರವಾಡದ ಜಿಲ್ಲಾ ನ್ಯಾಯಾಲಯವನ್ನು ಬಂದ್ ಮಾಡಲಾಗಿದೆ. ನ್ಯಾಯಾಲಯಕ್ಕೆ ಆಗಮಿಸುವ ಸಾರ್ವಜನಿಕರ ಮಾಹಿತಿಗಾಗಿ ಮುಖ್ಯ ಗೇಟ್ ಬಳಿ ಸೂಚನಾ ಫಲಕ ಹಾಕಲಾಗಿದೆ.
ಮುಂದಿನ ಆದೇಶ ಬರುವರೆಗೂ ನ್ಯಾಯಾಲಯವನ್ನು ಬಂದ್ ಮಾಡಲಾಗಿದೆ. ಸಾರ್ವಜನಿಕರ ವ್ಯಾಜ್ಯಗಳನ್ನು ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು. ಜನರು ತಮ್ಮ ವ್ಯಾಜ್ಯದ ಮಾಹಿತಿಗಾಗಿ ವಕೀಲರನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಕೊರೊನಾ ವೈರಸ್ ತೀವ್ರಗತಿಯಲ್ಲಿ ಹರಡುತ್ತಿರುವುದರಿಂದ ಸರ್ಕಾರ ಹೆಚ್ಚು ಜನ ಸೇರಬಾರದು ಎಂದು ಆದೇಶ ಹೊರಡಿಸಿದೆ. ಈ ಹಿನ್ನೆಲೆ ಧಾರವಾಡ ಜಿಲ್ಲಾ ನ್ಯಾಯಾಲಯ ಕೂಡ ಈ ನಿರ್ಧಾರಕ್ಕೆ ಬಂದಿದೆ. ಹೀಗಾಗಿ ತುರ್ತು ಪ್ರಕರಣಗಳನ್ನಷ್ಟೇ ನ್ಯಾಯಾಲಯ ವಿಚಾರಣೆ ನಡೆಸಲಿದೆ.