ETV Bharat / state

ಬಿಜೆಪಿ ಸರ್ಕಾರದಿಂದ ದೇಶದ ಆರ್ಥಿಕ ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಕೆ.ಹೆಚ್.ಮುನಿಯಪ್ಪ

ದೇಶದಲ್ಲಿ ಆರ್ಥಿಕ ವ್ಯವಸ್ಥೆ ಕುಸಿದಿದೆ. ಸರ್ಕಾರ ಉದ್ಯೋಗ ಸೃಷ್ಟಿಯಲ್ಲಿ ಇಳಿಕೆಯಾಗಿ ಇಂದಿನ ಯುವಕರು ಉದ್ಯೋಗ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅದನ್ನು ಸುಧಾರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ, ಆಡಳಿತ ಸರ್ಕಾರದ ವಿರುದ್ಧ ಕಿಡಿಕಾರಿದರು.

Economy has collapsed in BJP Government: K. H. Muniyappa
ಬಿಜೆಪಿ ಸರ್ಕಾರದಿಂದ ದೇಶದ ಆರ್ಥಿಕ ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಕೆ. ಹೆಚ್. ಮುನಿಯಪ್ಪ
author img

By

Published : Jan 13, 2021, 9:03 PM IST

ಕಲಘಟಗಿ(ಧಾರವಾಡ): ಬಿಜೆಪಿ ಸರ್ಕಾರದ ಆಡಳಿತದಿಂದ ದೇಶದ ಆರ್ಥಿಕ ವ್ಯವಸ್ಥೆ ಸಂಪೂರ್ಣ ಕುಸಿತವಾಗಿರುವುದಲ್ಲದೇ ಅಭಿವೃದ್ಧಿ ವಿಚಾರದಲ್ಲೂ ಹಿಂದಿದೆ ಎಂದು ಕೇಂದ್ರ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ದೂರಿದರು.

ತಾಲೂಕಿನ ಮಡಕಿಹೊನ್ನಳ್ಳಿ ಗ್ರಾಮದ ಹತ್ತಿರ ಇರುವ ಮಾಜಿ ಸಚಿವ ಸಂತೋಷ್​ ಲಾಡ್ ಅಮೃತ ನಿವಾಸದಲ್ಲಿ ಕಾಂಗ್ರೆಸ್ ಬೆಂಬಲಿತ 27 ಗ್ರಾಮ ಪಂಚಾಯಿತಿ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶದಲ್ಲಿ ಆರ್ಥಿಕ ವ್ಯವಸ್ಥೆ ಕುಸಿದಿದೆ. ಸರ್ಕಾರ ಉದ್ಯೋಗ ಸೃಷ್ಟಿಯಲ್ಲಿ ಇಳಿಕೆಯಾಗಿ ಇಂದಿನ ಯುವಕರು ಉದ್ಯೋಗ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅದನ್ನು ಸುಧಾರಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ ಎಂದು ಆಡಳಿತ ಸರ್ಕಾರದ ವಿರುದ್ಧ ಕಿಡಿಕಾರಿದರು.

ಇದೇ ವೇಳೆ ಮಾಜಿ ಸಚಿವ ಸಂತೋಷ್​ ಲಾಡ್ ಮಾತನಾಡಿ, ತಾನು ಗ್ರಾಮೀಣ ಪ್ರದೇಶದ ದುಡಿಯುವ ಕೂಲಿ ಕಾರ್ಮಿಕರಿಗೆ, ರೈತರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಿ ಬಡವರ ಕಣ್ಣೀರು ಒರೆಸಿದೆ. ತಾನು ಹಣ ಗಳಿಸಲು ರಾಜಕೀಯಕ್ಕೆ ಬಂದಿಲ್ಲ. ಜನಸಾಮಾನ್ಯರಿಗೆ, ರೈತರಿಗೆ, ಕೂಲಿಕಾರ್ಮಿಕರಿಗೆ ಸರ್ಕಾರದ ಯೋಜನೆ ತಲುಪಲಿ ಎಂದು ಹಾಗೂ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಉದ್ದೇಶದಿಂದ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.