ಕಲಘಟಗಿ: ತಾಲೂಕಿನ ಜಂಜುನಬೈಲ್ ಗ್ರಾಮದಲ್ಲಿ ಕೊರೊನಾ ಸೋಂಕು ಪ್ರಕರಣ ದೃಢಪಟ್ಟ ಹಿನ್ನೆಲೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ಪ್ರತ್ಯೇಕ ಬಸ್ನಲ್ಲಿ ಕರೆ ತಂದು ಪರೀಕ್ಷೆ ಬರೆಸಲಾಯಿತು.
ಮಂಗಳವಾರ ಗ್ರಾಮದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಕಂಡು ಬಂದ ಕಾರಣ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ, ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎಫ್.ಕುಮಾರ, ಮುಖ್ಯ ಅಧೀಕ್ಷಕ ಶ್ರೀಧರ ಪಾಟಿಲ ಕುಲಕರ್ಣಿ, ಡಿ.ಎಸ್.ತೊರವತ್ತ, ಮಹೇಶ್ ದೂಳಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಹತ್ತು ವಿದ್ಯಾರ್ಥಿಗಳ ಮನವೊಲಿಸಿ ಪರೀಕ್ಷಾ ಕೇಂದ್ರಕ್ಕೆ ಕರೆ ತಂದರು.
ಬಳಿಕ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಮಾಡಿ, ಜ್ವರ ಇಲ್ಲದೇ ಇರುವುದನ್ನು ಖಾತ್ರಿಪಡಿಸಿಕೊಂಡು ಆ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕೂರಿಸಿ ಪರೀಕ್ಷೆ ಬರೆಸಲಾಯಿತು.