ಧಾರವಾಡ: ಜಿಲ್ಲೆಯಲ್ಲಿ ಇಂದು 191 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 4647 ಕ್ಕೆ ಏರಿಕೆಯಾಗಿದೆ.
ಇಂದು ಕೊರೊನಾಗೆ 8 ಜನ ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 155ಕ್ಕೆ ಏರಿದೆ. ಇಂದು 88 ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೂ 1934 ಮಂದಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2558 ಸಕ್ರಿಯ ಪ್ರಕರಣಗಳಿವೆ.