ETV Bharat / state

ಮೇಯರ್ ಉಪಮೇಯರ್ ಆಯ್ಕೆಗೆ ಚುನಾವಣೆ: ಮುಹೂರ್ತ ಫಿಕ್ಸ್ ಆಗೊದೊಂದೇ ಬಾಕಿ

ಹುಬ್ಬಳ್ಳಿ ಹಾಗೂ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯ ದಿನಾಂಕ ನಿಗದಿಯಾಗಬೇಕಿದೆ.

ಹುಬ್ಬಳ್ಳಿ ಹಾಗೂ ಧಾರವಾಡ ಮಹಾನಗರ ಪಾಲಿಕೆ
ಹುಬ್ಬಳ್ಳಿ ಹಾಗೂ ಧಾರವಾಡ ಮಹಾನಗರ ಪಾಲಿಕೆ
author img

By

Published : May 17, 2023, 6:53 PM IST

ಹುಬ್ಬಳ್ಳಿ ಹಾಗೂ ಧಾರವಾಡ ಮಹಾನಗರ ಪಾಲಿಕೆ

ಹುಬ್ಬಳ್ಳಿ: ಮೊನ್ನೆಯಷ್ಟೇ ವಿಧಾನಸಭಾ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದಿದೆ. ಈ ನಡುವೆ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಕಾಲ ಸನ್ನಿಹಿತವಾಗುತ್ತಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಚುನಾವಣೆ ದಿನಾಂಕ ನಿಗದಿಯಾಗಬೇಕಿದೆ.

ಹಾಲಿ ಮೇಯರ್ ಈರೇಶ ಅಂಚಟಗೇರಿ ಹಾಗೂ ಉಪ ಮೇಯ‌ರ್ ಉಮಾ ಮುಕುಂದ ಅವರ 1 ವರ್ಷದ ಅವಧಿ ಮೇ 27ಕ್ಕೆ ಪೂರ್ಣಗೊಳ್ಳಲಿದೆ. ಮುಂದಿನ 1 ವರ್ಷದ ಅವಧಿಗೆ ನೂತನ ಮೇಯರ್-ಉಪ ಮೇಯ‌ರ್ ಆಯ್ಕೆ ಚುನಾವಣೆಗೆ ದಿನಾಂಕವನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ನಿಗದಿಪಡಿಸಬೇಕು. ಚುನಾವಣೆ ನಡೆಸುವಂತೆ ಕೋರಿ ಹು-ಧಾ ಮಹಾನಗರ ಪಾಲಿಕೆ ಅಧಿಕಾರಿಗಳು, ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯಲಿದ್ದಾರೆ.

ಚುನಾವಣೆಗೆ ದಿನಾಂಕ ನಿಗದಿಪಡಿಸಲು ವಿಳಂಬ: ಇನ್ನು ವಿಧಾನಸಭೆ ಚುನಾವಣೆ ಕರ್ತವ್ಯ ಹಾಗೂ ಮಾದರಿ ನೀತಿ ಸಂಹಿತೆಯ ಹಿನ್ನೆಲೆ ಪಾಲಿಕೆಯ ಮೇಯರ್-ಉಪ ಮೇಯರ್ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿಪಡಿಸಲು ವಿಳಂಬವಾಗಿದೆ. ಹಾಗಾಗಿ ಮೇ 27ರೊಳಗೆ ನೂತನ ಮೇಯರ್-ಉಪ ಮೇಯರ್ ಆಯ್ಕೆ ಚುನಾವಣೆ ನಡೆಯುವುದಿಲ್ಲ. ನೂತನ ಮೇಯರ್-ಉಪ ಮೇಯರ್ ಆಯ್ಕೆಯಾಗುವವರೆಗೆ ಹಾಲಿ ಮೇಯರ್- ಉಪ ಮೇಯರ್ ಆಡಳಿತ ಮುಂದುವರಿಯಲಿದೆ.

ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದೆ : ನೂತನ ಮೇಯ‌ರ್-ಉಪ ಮೇಯರ್ ಆಯ್ಕೆಗೆ ಈಗಾಗಲೇ ಮೀಸಲಾತಿ ನಿಗದಿಯಾಗಿದೆ. ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಕೆಲ ತಿಂಗಳುಗಳ ಹಿಂದೆಯೇ ಪ್ರಕಟಿಸಿದೆ. ಹು ಧಾ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಆಡಳಿತವಿದೆ. ಮೀಸಲಾತಿಯ ಅನ್ವಯ ಬಿಜೆಪಿಯಲ್ಲಿ ಆಕಾಂಕ್ಷಿಗಳು ದೊಡ್ಡ ಸಂಖ್ಯೆಯಲ್ಲಿದ್ದು, ಪ್ರಾದೇಶಿಕ ಆಯುಕ್ತರು ಚುನಾವಣೆಗೆ ದಿನಾಂಕ ನಿಗದಿಪಡಿಸುವುದನ್ನೇ ಕಾಯುತ್ತಿದ್ದಾರೆ.

ಪಾಲಿಕೆ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ​ ಹೊಸದೊಂದು ವ್ಯವಸ್ಥೆ ಜಾರಿ ಬಗ್ಗೆ ಚಿಂತನೆ ನಡೆಸಿತ್ತು. ಟ್ಯಾಗ್ ಆಧಾರಿತ ಬಕೆಟ್‌ಗಳನ್ನು ಹಂಚಿಕೆ ಮಾಡುವ ಮೂಲಕ ಬಕೆಟ್ ಯೋಜನೆ ಜಾರಿಗೆ ತರಬೇಕು ಎನ್ನುವ ಚರ್ಚೆ ಪಾಲಿಕೆಯಲ್ಲಿ ಶುರುವಾಗಿತ್ತು. ಈ ಯೋಜನೆಗೆ ಸಾರ್ವಜನಿಕ ವಲಯದಲ್ಲಿ (ನವೆಂಬರ್​ 22-2022)ರಂದು ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಹುಬ್ಬಳ್ಳಿ ಧಾರವಾಡವನ್ನು ಸ್ವಚ್ಛ ಮಹಾನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ಮಹಾನಗರ ವ್ಯಾಪ್ತಿಯಲ್ಲಿ ಈಗಾಗಲೇ 2.12 ಲಕ್ಷ ಮನೆಗಳಿಗೆ ರೇಡಿಯೋ ಫ್ರಿಕ್ವೆನ್ಸಿ ಐಡೆಂಟಿಫಿಕೇಶನ್ ಟ್ಯಾಗ್ (ಆರ್‌ಎಫ್‌ಐಡಿ) ಅಳವಡಿಸಲಾಗಿತ್ತು. ಇನ್ನು 30 ಸಾವಿರ ಮನೆಗಳಿಗೆ ಟ್ಯಾಗ್ ಅಳವಡಿಸುವುದು ಬಾಕಿ ಉಳಿಸಿಕೊಂಡಿತ್ತು.

ಪಾಲಿಕೆ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ​ ಹೊಸದೊಂದು ವ್ಯವಸ್ಥೆ ಜಾರಿ ಬಗ್ಗೆ ಚಿಂತನೆ ನಡೆಸಿತ್ತು. ಟ್ಯಾಗ್ ಆಧಾರಿತ ಬಕೆಟ್‌ಗಳನ್ನು ಹಂಚಿಕೆ ಮಾಡುವ ಮೂಲಕ ಬಕೆಟ್ ಯೋಜನೆ ಜಾರಿಗೆ ತರಬೇಕು ಎನ್ನುವ ಚರ್ಚೆ ಪಾಲಿಕೆಯಲ್ಲಿ ಶುರುವಾಗಿತ್ತು. ಈ ಯೋಜನೆಗೆ ಸಾರ್ವಜನಿಕ ವಲಯದಲ್ಲಿ (ನವೆಂಬರ್​ 22-2022)ರಂದು ಸಾಕಷ್ಟು ವಿರೋಧಗಳು ವ್ಯಕ್ತವಾಗಿತ್ತು.

ಇದನ್ನೂ ಓದಿ: ಹಳೆ ಯೋಜನೆ ಹಳ್ಳ ಹಿಡಿಸಿ ಹೊಸ ಯೋಜನೆಗೆ ಮುಂದಾದ ಪಾಲಿಕೆ: ಪಾಲಿಕೆ ನಿರ್ಧಾರಕ್ಕೆ ಸಾರ್ವಜನಿಕರ ಆಕ್ಷೇಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.