ETV Bharat / state

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ನಾಲ್ಕು ಜಿಲ್ಲೆಗಳನ್ನೊಳಗೊಂಡ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ.ಕುಬೇರಪ್ಪ ನಾಮಪತ್ರ ಸಲ್ಲಿಸಿದರು.

nomination
nomination
author img

By

Published : Oct 7, 2020, 3:28 PM IST

ಧಾರವಾಡ: ಕರ್ನಾಟಕ ಪಶ್ಚಿಮ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ.ಕುಬೇರಪ್ಪ ನಾಮಪತ್ರ ಸಲ್ಲಿಸಿದರು.

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ನಾಲ್ಕು ಜಿಲ್ಲೆಗಳನ್ನೊಳಗೊಂಡ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕುಬೇರಪ್ಪ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಕೆ ಮಾಡಿ ಮಾತನಾಡಿದ ಅವರು, ನಾಲ್ಕು ಬಾರಿ ಎಚ್.ಕೆ.ಪಾಟೀಲ್ ಈ ಕ್ಷೇತ್ರದಿಂದ ಗೆದ್ದಿದ್ದಾರೆ. ಪಶ್ಚಿಮ ಕ್ಷೇತ್ರದಲ್ಲಿ ಈ ಬಾರಿಯೂ ಕಾಂಗ್ರೆಸ್ ಪರ ಗಾಳಿ ಬೀಸಿದೆ.‌ ಕೆಲ ತಪ್ಪು ನಿರ್ಧಾರಗಳಿಂದ ಈ ಕ್ಷೇತ್ರದಲ್ಲಿ ನನಗೆ ಎರಡು ಬಾರಿ ಹಿನ್ನಡೆಯಾಗಿದೆ. ಹಿಂದಿ‌ನ ತಪ್ಪು ಸರಿಪಡಿಸಲಾಗಿದೆ, ಪುನಃ ತಪ್ಪು ಮರುಕಳಿಸದಂತೆ ಎಚ್ಚರ ವಹಿಸಿದೆ ಎಂದರು.

ಈಗಾಗಲೇ ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ನಾಲ್ಕು ಜಿಲ್ಲೆಗಳಲ್ಲಿ ಮೂರು ಬಾರಿ ಸಂಚಾರ ಮಾಡಿ, ಹೆಚ್ಚು ಮತದಾರರ ನೋಂದಣಿ ಮಾಡಿಸಿದ್ದು, ಮತದಾರರಿಂದ ಉತ್ತಮ ಬೆಂಬಲವೂ ಇದೆ ಎಂದು ಹೇಳಿದರು.

ಕ್ಷೇತ್ರದ ಮತದಾರರ ಮನೆ ಮನೆಗೆ ಕಾರ್ಯಕರ್ತರು ತೆರಳಿ ಓಲೈಸುವ ಕೆಲಸ ಮಾಡಿದ್ದಾರೆ. ಕೋವಿಡ್ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ರಾಜಕೀಯ ಸಭೆ, ಪ್ರಚಾರ ನಡೆಸುವುದಾಗಿ ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.