ETV Bharat / state

ಸೀಲ್‍ಡೌನ್ ಏರಿಯಾಗಳ ನಿರ್ಬಂಧಗಳನ್ನು ಬಿಗಿಗೊಳಿಸಿ: ಡಿಸಿ ಸೂಚನೆ - Darwad latest news

ಮಹಾಮಾರಿ ಕೊರೊನಾ ತಡೆಗೆ ಕೆಲ ಪ್ರದೇಶದಲ್ಲಿ ಸೀಲ್ ಡೌನ್ ಮಾಡಲಾಗಿದ್ದು, ನಿಯಮಗಳನ್ನು ಉಲ್ಲಂಘಿಸುವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Deepa cholan
Deepa cholan
author img

By

Published : Jun 26, 2020, 7:44 PM IST

ಧಾರವಾಡ: ಸೀಲ್‍ ಡೌನ್ ಮಾಡಿರುವ ಪ್ರದೇಶಗಳಿಂದ ಅನುಮತಿ ಪಡೆಯದೆ ಮತ್ತು ಅನಗತ್ಯವಾಗಿ ಹೊರ ಬರುವವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಆರೋಗ್ಯ ಕಾರ್ಯಪಡೆಯ ಸಭೆಯಲ್ಲಿ ಮಾತನಾಡಿದರು. ಗ್ರಾಮೀಣ ಭಾಗದ ಸೀಲ್‍ಡೌನ್ ಪ್ರದೇಶಗಳಲ್ಲಿ ಸೀಲ್‍ಡೌನ್ ನಿಯಮಗಳ ಪಾಲನೆ ಕಟ್ಟುನಿಟ್ಟಾಗಿ ಆಗುತ್ತಿಲ್ಲ, ಅದರಲ್ಲೂ ವಿಶೇಷವಾಗಿ ಮೊರಬ ಗ್ರಾಮದಲ್ಲಿ ಸೀಲ್‍ಡೌನ್ ನಿಯಮಗಳನ್ನು ಬಿಗಿಗೊಳಿಸಿ, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮೂರು ರಸ್ತೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು. ಪೊಲೀಸ್, ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ದಿನದ 24 ಗಂಟೆ ಸ್ಥಳದಲ್ಲಿದ್ದು, ಕಾವಲು ಕಾಯಬೇಕು ಎಂದು ಸೂಚಿಸಿದರು.

ಸೀಲ್‍ಡೌನ್ ಪ್ರದೇಶದಲ್ಲಿ ಮನೆ-ಮನೆಗೆ ಹೋಗಿ ಆರೋಗ್ಯ ಕಾರ್ಯಕರ್ತರು ಸಮೀಕ್ಷೆ ಮಾಡಿ ಮಾಹಿತಿ ಸಂಗ್ರಹಿಸಬೇಕು. ಮಾಹಿತಿ ನೀಡದೆ ಅಸಹಕಾರ, ದುರ್ವತನೆ ತೋರುವವರ ವಿರುದ್ಧ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳವಂತೆ ಸೂಚಿಸಿದರು.

ಕಂಟೈನ್ಮೆಂಟ್​ ಪ್ರದೇಶದಲ್ಲಿನ ಜನರ ಮನೆ ಬಾಗಿಲಿಗೆ ತರಕಾರಿ, ಪಡಿತರ, ಆರೋಗ್ಯ ಸೇವೆಗಳು ತಲುಪುವಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಆದರೂ ಕೆಲವರು ಅನಗತ್ಯವಾಗಿ ಹೊರಗೆ ಸಂಚರಿಸುತ್ತಿದ್ದಾರೆ. ಮುಖಗವಸು (ಮಾಸ್ಕ್) ಧಾರಣೆ ಮತ್ತು ಸಾಮಾಜಿಕ ಅಂತರ ಪಾಲನೆ ಮಾಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಹಾಗಾಗಿ ಪೊಲೀಸ್, ಕಂದಾಯ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸೀಲ್‍ಡೌನ್, ಕಂಟೆನ್ಮೆಂಟ್ ಪ್ರದೇಶಗಳಲ್ಲಿ ಇಂದಿನಿಂದ ವಿಶೇಷ ಕಾರ್ಯಚರಣೆ (ಡ್ರೈವ್) ಮಾಡಿ, ನಿಯಮಗಳನ್ನು ಪಾಲಿಸದವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಸೂಲು ಮಾಡಬೇಕು. ತಪ್ಪು ಮರುಕಳಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸೂಕ್ತ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ಎಪಿಎಂಸಿ, ಬಸ್‍ನಿಲ್ದಾಣ ಸೇರಿದಂತೆ ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಸಂಚರಿಸುವವರ ವಿರುದ್ಧ ಕಾರ್ಯಾಚರಣೆ ಮಾಡಿ, ದಂಡ ವಿಧಿಸಿ, ಎಚ್ಚರಿಕೆ ನೀಡಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಹಾಗೂ ತಹಶೀಲ್ದಾರರಿಗೆ ನಿರ್ದೇಶಿಸಿದರು.

ಇನ್ನೂ ಸೀಲ್‍ಡೌನ್ ಪ್ರದೇಶದಲ್ಲಿ ಸಂಪೂರ್ಣ ಸೀಲ್‍ಡೌನ್ ಪಾಲನೆ ಆಗದಿದ್ದರೆ, ಸಂಬಂಧಿಸಿದ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಿ, ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.