ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತವಿಲ್ಲದ ಕಾರಣ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಸಿಂಗಲ್ ಲಾರ್ಜೆಸ್ಟ್ ಪಕ್ಷವಾಗಿದೆ. ಪಾಲಿಕೆ ಅಧಿಕಾರದ ಗದ್ದುಗೆ ಏರಲು ಬಿಜೆಪಿಗೆ ಯಾವುದೇ ಸಮಸ್ಯೆಯಿಲ್ಲ. ಈಗಾಗಲೇ ನಮ್ಮ ಬಳಿ ಆರು ಜನಪ್ರತಿನಿಧಿಗಳ ಬಲವಿದೆ. ಬಂಡಾಯ ಅಭ್ಯರ್ಥಿಗಳು ಕೂಡ ನಮಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದರು.
ಇದನ್ನೂ ಓದಿ: ಮೂರು ಪಾಲಿಕೆ ಚುನಾವಣೆ ಫಲಿತಾಂಶ ಸಮಾಧಾನ ತಂದಿದೆ: ಡಿಕೆಶಿ
ಬಂಡಾಯಗಾರರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದರ ಬಗ್ಗೆ ಪಕ್ಷ ತೀರ್ಮಾನಿಸುತ್ತೆ. ಕಾಂಗ್ರೆಸ್ ಏನೇ ಮಾಡಿದರೂ ಬಹುಮತ ಬರಲ್ಲ, ನಮಗೆ ಬಹುಮತ ಸಿಗಲಿದ್ದು, ನಾವು ಯಾವುದೇ ತೊಂದರೆ ಇಲ್ಲದೇ ಪಾಲಿಕೆ ಗದ್ದುಗೆ ಏರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.