ಹುಬ್ಬಳ್ಳಿ: ಲಾಕ್ಡೌನ್ ಹಿನ್ನೆಲೆ ಜಾನಪದ ಕಲಾವಿದರ ಜೀವನ ಅಕ್ಷರಶಃ ಸಂಕಷ್ಟಕ್ಕೆ ಸಿಲುಕಿದ್ದು, ಕಲಾವಿದರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಆಗ್ರಹಿಸಿ ವಿಶಿಷ್ಟವಾಗಿ ಪ್ರತಿಭಟನೆ ನಡೆಸಲಾಯಿತು.
ನಗರದಲ್ಲಿ ಜಾನಪದ ಗೊಂಬೆ ಕುಣಿತ ಕಲಾವಿದರ ಸಂಘ ಹಾಗೂ ಚಾಮುಂಡೇಶ್ವರಿ ದಾಲಪಟ ಕಲಾವಿದರ ಸಂಘದಿಂದ ವಿಶಿಷ್ಟ ವೇಷ ಭೂಷಣ ಧರಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ದೇಶಾದ್ಯಂತ ಲಾಕ್ಡೌನ್ ಘೋಷಣೆ ಮಾಡಿದ ಬೆನ್ನಲ್ಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ ಸಮುದಾಯಗಳಿಗೆ ಹಾಗೂ ಜನತೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದು ಸ್ವಾಗತಾರ್ಹವಾಗಿದೆ. ನಮ್ಮ ನೆರವಿಗೂ ಸರ್ಕಾರ ಧಾವಿಸಬೇಕು ಎಂದು ನೃತ್ಯದ ಮೂಲಕ ವಿನೂತನವಾಗಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.