ETV Bharat / state

ಧಾರವಾಡ: ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ - dharwad Farmer commits suicide

ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಡಿದ್ದ ಸಾಲ ತೀರಿಸಲಾಗದೆ ಸಾವಿಗೆ ಶರಣಾಗಿದ್ದಾರೆ.

Farmer commits suicide
ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ
author img

By

Published : Aug 28, 2022, 7:16 PM IST

ಧಾರವಾಡ: ಸಾಲ ತೀರಿಸಲಾಗದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ನಡೆದಿದೆ. ಬಸವರಾಜ ಉಣಕಲ್ (48) ಆತ್ಮಹತ್ಯೆಗೆ ಶರಣಾದ ರೈತನಾಗಿದ್ದಾರೆ. ನಗರದ ಹೊರ ಹೊಲಯದಲ್ಲಿರುವ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದು, 2 ಎಕರೆ ಜಮೀನಿನಲ್ಲಿ 3 ಲಕ್ಷ ಸಾಲ ಪಡೆದಿದ್ದರು ಎನ್ನಲಾಗ್ತಿದೆ.

ಅಕಾಲಿಕ ಮಳೆಯಿಂದಾಗಿ ಬೆಳೆಗೆ ಸಂಪೂರ್ಣ ಹಾನಿಯಾದ ಹಿನ್ನೆಲೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಸಾಲಬಾಧೆ ತಾಳಲಾರದೇ ವಿಷ ಸೇವಿಸಿ ರೈತ ಆತ್ಮಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.