ಧಾರವಾಡ: ಸಾಲಬಾಧೆ ತಾಳಲಾರದೇ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವಲಗುಂದ ತಾಲೂಕಿನ ಶಿರೂರ ಗ್ರಾಮದಲ್ಲಿ ನಡೆದಿದೆ.
ಸುಭಾಷ ಶಿರಿಯಣ್ಣವರ (33) ಮೃತ ರೈತ. ಈತ ಬ್ಯಾಂಕ್ ಆಫ್ ಬರೋಡ ಹಾಗೂ ಕೆಲ ಫೈನಾನ್ಸ್‌ಗಳಲ್ಲಿ 9 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದ.
ಘಟನೆ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.