ETV Bharat / state

ರೈತ ಹುತಾತ್ಮ ದಿನಾಚರಣೆ; 5 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ.. ಡಿಸಿ ಆದೇಶ - Farmer Martyr Day news

ಹುತಾತ್ಮ ರೈತರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವವರು ಪ್ರತ್ಯೇಕವಾಗಿ ಒಬ್ಬೊಬ್ಬರೇ ಬಂದು ಸಾಮಾಜಿಕ ಅಂತರ ಕಾಪಾಡಿಕೊಂಡು ಗೌರವ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶಿಸಿದ್ದಾರೆ.

author img

By

Published : Jul 20, 2020, 9:48 PM IST

ಧಾರವಾಡ: ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಲಾಕ್‍ಡೌನ್ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ನಾಳೆ ನವಲಗುಂದದಲ್ಲಿ ನಡೆಯುವ ರೈತ ಹುತಾತ್ಮ ದಿನಾಚರಣೆಯಲ್ಲಿ ಐದಕ್ಕಿಂತ ಹೆಚ್ಚು ಜನ ಸೇರಬಾರದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದ್ದಾರೆ.

ಯಾವುದೇ ಸಭೆ ಸಮಾರಂಭ, ಭಾಷಣ ಆಯೋಜಿಸಬಾರದು. ಹುತಾತ್ಮ ರೈತರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡುವವರು ಪ್ರತ್ಯೇಕವಾಗಿ ಒಬ್ಬೊಬ್ಬರೇ ಬಂದು ಸಾಮಾಜಿಕ ಅಂತರ ಕಾಪಾಡಿಕೊಂಡು ಗೌರವ ಸಲ್ಲಿಸಬೇಕು ಎಂದು ಆದೇಶಿಸಿದ್ದಾರೆ.

ಈ ಸಂದರ್ಭದಲ್ಲಿ ಯಾವುದೇ ರಾಜಕೀಯ ಪಕ್ಷ, ಸಂಘಟನೆಗಳು ತಮ್ಮ ಧ್ವಜ, ಲಾಂಛನಗಳನ್ನು ಪ್ರದರ್ಶಿಸಬಾರದು. ಲಾಕ್‍ಡೌನ್ ನಿಯಮ ಉಲ್ಲಂಘಿಸಬಾರದು ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.