ಧಾರವಾಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿದ್ದಾರೆ.
ಧಾರವಾಡದ ಕಲಾಭವನದಿಂದ ಮೆರವಣಿಗೆ ಮೂಲಕ ಸಾಗಿ ಬಂದು ರೈತರು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಮೊಳಗಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸಾಲಮನ್ನಾ, ಬರ ಪರಿಹಾರ, ಬೆಳೆ ವಿಮೆ ನೀಡದ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸಿ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.