ಹುಬ್ಬಳ್ಳಿ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ತಾಲೂಕಿನ ಶಿರೂರ ಗ್ರಾಮದಲ್ಲಿ ನಡೆದಿದೆ.
ಸುಭಾಷ್ ಸಣ್ಣಮನಿ ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ. ಶಿರೂರು ಗ್ರಾಮದ ವಿಜಯ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ಗಳಲ್ಲಿ 17 ಲಕ್ಷ ಸಾಲ ಮಾಡಿಕೊಂಡಿದ್ದ. ಈ ಸಾಲ ತೀರಿಸಲಾಗದೇ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.