ಹುಬ್ಬಳ್ಳಿ: ಎಪಿಎಂಸಿ ಕಾಯ್ದೆ, ಭೂ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ತಲೆ ಮೇಲೆ ಇಟ್ಟಿಗೆ ಹೊತ್ತುಕೊಂಡು ವಿನೂತನವಾಗಿ ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಮೂರು ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ಅಷ್ಟೇ ಅಲ್ಲದೆ ಪ್ರತಿಭಟನಾಕಾರರು ಅಂಚೆ ಕಚೇರಿ ಹಾಗೂ ಟೆಲಿಫೋನ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸ್ ಸಿಬ್ಬಂದಿ ತಡೆದು ಶಾಂತಿಯುತವಾಗಿ ಪ್ರತಿಭಟನೆ ಮಾಡುವಂತೆ ಮನವಿ ಮಾಡಿದರು.