ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘಟನೆಗಳಿಂದ ಬಂದ್​.. - ರೈತ ಸಂಘಟನೆ

ಇಂದು ನವಲಗುಂದ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಜೊತೆಗೂಡಿ ರೈತ ಹೋರಾಟಗಾರರು ಪಟ್ಟಣವನ್ನು ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ನವಲಗುಂದ ಪಟ್ಟಣ,navalagunda
author img

By

Published : Aug 3, 2019, 8:26 PM IST

ಧಾರವಾಡ : ರೈತ ಬಂಡಾಯದ ನೆಲದಲ್ಲಿ ಮತ್ತೊಮ್ಮೆ ಅನ್ನದಾತರು ಸಿಡಿದೇಳುವ ಲಕ್ಷಣಗಳು ಕಾಣುತ್ತಿವೆ. ಇಂದು ನವಲಗುಂದ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಜೊತೆಗೂಡಿ ರೈತ ಹೋರಾಟಗಾರರು ಪಟ್ಟಣವನ್ನು ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಜುಲೈ 21ರಂದು ಧಾರವಾಡದ ನವಲಗುಂದದಲ್ಲಿ ರೈತ ಹುತಾತ್ಮ ದಿನವನ್ನು ಆಚರಿಸಿದ್ದ ನಾಡಿನ ನೂರಾರು ರೈತರು ಅಗಸ್ಟ್‌ 3ರೊಳಗಾಗಿ ತಮ್ಮ ಬೇಡಿಕೆಗಳನ್ನು ಈಡೇಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದರು. ಆದರೆ, ಅನ್ನದಾತರ ಬೇಡಿಕೆ ಬಗ್ಗೆ ಈವರೆಗೂ ಗಮನ ಹರಿಸದ ಸರ್ಕಾರದ ವಿರುದ್ಧ ಮತ್ತೊಮ್ಮೆ ರೈತರು ಸಿಡಿದೆದ್ದಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವಲಗುಂದ ಬಂದ್​ ಮಾಡಲಾಗಿತ್ತು

ಕಳಸಾ ಬಂಡೂರಿ ನಾಲೆಯಿಂದ ಮಲಪ್ರಭಾ ನದಿಗೆ ತಕ್ಷಣ ನೀರು ಹರಿಸಲು ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕು ಹಾಗೂ ಕಳಸಾ ಬಂಡೂರಿ ಹೋರಾಟದ ವೇಳೆ ರೈತರು, ವಿದ್ಯಾರ್ಥಿಗಳು ಸೇರಿದಂತೆ ಅನೇಕ ಹೋರಾಟಗಾರರ ಮೇಲೆ ಪೊಲೀಸರು ಹಾಕಿರುವ ಕೇಸ್​ಗಳನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಅಲ್ಲದೆ ಕೇಂದ್ರ ಸರ್ಕಾರ ನಾಡಿನ ಅನ್ನದಾತರಿಗೆ ಪ್ರತಿ ತಿಂಗಳು ಪ್ರೋತ್ಸಾಹ ಧನವನ್ನು ನೀಡಬೇಕು. ಹೀಗೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ವಿಜಯಪುರ -ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ಟೈರ್ ಸುಟ್ಟು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ‌ದರು. ಪಟ್ಟಣದ ಜನರು ಸ್ವಯಂ ಪ್ರೇರಿತರಾಗಿ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದು, ಸರ್ಕಾರ ಈಗಲೂ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಎಚ್ಚರಿಕೆ ನೀಡಿದರು.

Intro:ಧಾರವಾಡ: ರೈತ ಬಂಡಾಯದ ನೆಲದಲ್ಲಿ ಮತ್ತೊಮ್ಮೆ ಅನ್ನದಾತರ ಕಿಚ್ಚು ಹೊತ್ತುವ ಲಕ್ಷಣ ಕಾಣುತ್ತಿದೆ. ಜುಲೈ 21ರಂದು ದಾರವಾಡದ ನವಲಗುಂದದಲ್ಲಿ ರೈತ ಹುತಾತ್ಮ ದಿನವನ್ನು ಆಚರಿಸಿದ್ದ ನಾಡಿನ ನೂರಾರು ರೈತರು ಅಗಸ್ಟ್ 3ರ ಒಳಗಾಗಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೆಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ, ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದರು.

ಆದರೆ ಅನ್ನದಾತರ ಬೇಡಿಕೆ ಬಗ್ಗೆ ಈವರೆಗೂ ಗಮನ ಹರಿಸದ ಸರ್ಕಾರದ ವಿರುದ್ಧ ಮತ್ತೊಮ್ಮೆ ರೈತರು ಈಗ ಸಿಡಿದೆದ್ದಿದ್ದಾರೆ. ಕಳಸಾ ಬಂಡೂರಿ ನಾಲೆಯಿಂದ ಮಲಪ್ರಭಾ ನದಿಗೆ ತಕ್ಷಣ ನೀರು ಹರಿಸಲು ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕು ಹಾಗೂ ಕಳಸಾ ಬಂಡೂರಿ ಹೋರಾಟದ ವೇಳೆ ರೈತರು, ವಿದ್ಯಾರ್ಥಿಗಳು ಸೇರಿದಂತೆ ಅನೇಕ ಹೋರಾಟಗಾರ ಮೇಲೆ ಪೊಲೀಸರು ಹಾಕಿರುವ ಕೇಸ್ ಗಳನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಅಲ್ಲದೇ ಕೇಂದ್ರ ಸರ್ಕಾರ ನಾಡಿನ ಅನ್ನದಾತರಿಗೆ ಪ್ರತಿ ತಿಂಗಳು ಪ್ರೋತ್ಸಾಹ ಧನವನ್ನು ನೀಡಬೇಕು ಅಂತ ನವಲಗುಂದ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಜತೆಗೂಡಿ ಅನೇಕ ರೈತ ಹೋರಾಟಗಾರರು ಪಟ್ಟಣವನ್ನು ಬಂದ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.Body:ವಿಜಯಪುರ – ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದ್ದು ಟೈರ್ ಸುಟ್ಟು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ‌ ಅಸಮಾಧಾನ ಹೊರಹಾಕಿದ್ದಾರೆ. ಪಟ್ಟಣದ ಜನರು ಸ್ವಯಂ ಪ್ರೇರಿತರಾಗಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ಅಲ್ಲದೇ ಒಂದೊಮ್ಮೆ ಸರ್ಕಾರ ಈಗಲೂ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಅಂತ ಈ ವೇಳೆ ರೈತರು ಎಚ್ಚರಿಕೆ ನೀಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.