ETV Bharat / state

ಹುಬ್ಬಳ್ಳಿ: ಭೂ ಸುಧಾರಣಾ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ - ಹುಬ್ಬಳ್ಳಿಯಲ್ಲಿ ರೈತರ ಪ್ರತಿಭಟನೆ

ಭೂ ಸುಧಾರಣಾ‌ ಕಾಯ್ದೆ, ರೈತ ಮಸೂದೆ ಎ‌.ಪಿ.ಎಮ್ ಸಿ ಕಾಯ್ದೆ ರೈತರಿಗೆ ಮಾರಕವಾಗಿದ್ದು, ಕೂಡಲೇ ಸರ್ಕಾರ ಈ ಕಾಯ್ದೆಗಳನ್ನ ಹಿಂಪಡೆಯಬೇಕು ಎಂದು ಹುಬ್ಬಳ್ಳಿಯ ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Farmers protest against withdrawal of APMC Act
ಭೂ ಸುಧಾರಣಾ ಕಾಯ್ದೆ ಹಿಂಪಡೆಯುವಂತೆ ಕಳಸಾ ಬಂಡೂರಿ ಸಮಿತಿಯಿಂದ ಪ್ರತಿಭಟನೆ
author img

By

Published : Sep 24, 2020, 4:49 PM IST

ಹುಬ್ಬಳ್ಳಿ : ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಭೂ ಸುಧಾರಣಾ‌ ಕಾಯ್ದೆ, ರೈತ ಮಸೂದೆ ಎ‌.ಪಿ.ಎಮ್ ಸಿ ಕಾಯ್ದೆ ರೈತರಿಗೆ ಮಾರಕವಾಗಿದ್ದು, ಕೂಡಲೇ ಸರ್ಕಾರ ಈ ಕಾಯ್ದೆಗಳನ್ನ ಹಿಂಪಡೆಯಬೇಕು ಎಂದು ಕಳಸಾ ಬಂಡೂರಿ ರೈತ ಹೋರಾಟ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಭೂ ಸುಧಾರಣಾ ಕಾಯ್ದೆ ಹಿಂಪಡೆಯುವಂತೆ ಕಳಸಾ ಬಂಡೂರಿ ಸಮಿತಿಯಿಂದ ಪ್ರತಿಭಟನೆ

ನಗರದಲ್ಲಿಂದು ತಹಶೀಲ್ದಾರ್​ ಕಚೇರಿ ಎದುರುಗಡೆ ಪ್ರತಿಭಟನೆ ಮಾಡಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೋದಿ ದೇಶದಲ್ಲಿ ಸರ್ವಾಧಿಕಾರಿಯಂತೆ ಆಡಳಿತ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದಿದೆ. ಇದು ರೈತರ ಪರವಾಗಿಲ್ಲ. ಮರಣಶಾಸನವಾಗಿರುವ‌ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ ಉತ್ತೇಜನ ಮತ್ತು ಸೌಲಭ್ಯ ಮಸೂದೆಗೆ ಒತ್ತಾಯದ ಮೂಲಕ ಅಂಗೀಕಾರ ಮಾಡಿ ರೈತರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಹಾಗೂ ರಾಜ್ಯ ಸರಕಾರ ರೈತ ವಿರೋಧಿ ಕಾಯ್ದೆ ಹಿಂಪಡೆಯದಿದ್ದರೆ 28ಕ್ಕೆ ಕರ್ನಾಟಕ ಬಂದ್​​ಗೆ ಕರೆ ನೀಡಲಾಗುತ್ತೆ ಎಂದು ಎಚ್ಚರಿಕೆ ನೀಡಿ ತಹಶೀಲ್ದಾರ್​​​ ಮುಖಾಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.