ETV Bharat / state

ಧಾರವಾಡ: ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ರೈತರು

ಧಾರವಾಡದ ಯರಿಕೊಪ್ಪ ಗ್ರಾಮದ ಪಕ್ಕದಲ್ಲಿರುವ ಬೈಪಾಸ್​ನಲ್ಲಿ‌ ಜಮಾಯಿಸಿದ ರೈತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Farmers protest in Dharwad
ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ರೈತರು
author img

By

Published : Feb 6, 2021, 3:09 PM IST

ಧಾರವಾಡ: ಇಂದು ಕಿಸಾನ್ ಸಂಯುಕ್ತ ಮೋರ್ಚಾದ ಅಖಿಲ ಭಾರತ ಸಮಿತಿ ಕರೆ ನೀಡಿರುವ ಹೆದ್ದಾರಿ ಬಂದ್​ಗೆ ಬೆಂಬಲಿಸಿ ರೈತಪರ ಸಂಘಟನೆಗಳು ಹೆದ್ದಾರಿ ತಡೆ ನಡೆಸಿದವು.

ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ರೈತರು

ಧಾರವಾಡದ ಯರಿಕೊಪ್ಪ ಗ್ರಾಮದ ಪಕ್ಕದಲ್ಲಿರುವ ಬೈಪಾಸ್​ನಲ್ಲಿ‌ ಜಮಾಯಿಸಿದ ರೈತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿ ತಡೆಗೆ ಧಾರವಾಡದ ಸಂಯುಕ್ತ ಹೋರಾಟ ರೈತ, ಕಾರ್ಮಿಕ, ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟಗಳು ಸಾಥ್ ನೀಡಿದ್ದವು.

ಇದನ್ನೂ ಓದಿ: ರೈತರ ಮೇಲೆ ಕೇಂದ್ರ ಸರ್ಕಾರದಿಂದ ದಬ್ಬಾಳಿಕೆ: ವಾಟಾಳ್ ಆಕ್ರೋಶ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಬೇಕು. ಹೋರಾಟ ನಿರತ ರೈತರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ಹಿಂಪಡೆಯಬೇಕು. ರೈತರ ಹೋರಾಟ ಹತ್ತಿಕ್ಕುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಬಾರದು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್​ ನಿಯೋಜಿಸಲಾಗಿತ್ತು. ಹೆದ್ದಾರಿ ತಡೆಯಿಂದ ರಸ್ತೆ ಸಂಚಾರಕ್ಕೆ ತೊಂದರೆಯುಂಟಾಯಿತು. ರೈತರು ಮಧ್ಯಾಹ್ನದವರೆಗೆ ಹೆದ್ದಾರಿ ತಡೆ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.