ಧಾರವಾಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ರೈತರು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ರೈತ ಸಮುದಾಯಕ್ಕೆ ಬಹಳ ಹಾನಿಯಾಗಿದೆ. ಈ ಕುರಿತು ಅಧಿಕಾರಿಗಳು ಯಾವುದೇ ರೀತಿಯಲ್ಲಿ ಪರಿಶೀಲನೆ ಮಾಡಿಲ್ಲ. ಕೂಡಲೇ ಪರಿಶೀಲನೆ ಮಾಡಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಶೇಂಗಾ, ಗೋವಿನಜೋಳ ಸೇರಿದಂತೆ ವಿವಿಧ ತೋಟಗಾರಿಕಾ ಬೆಳೆಗಳು ಹಾಳಾಗಿವೆ. ಸರ್ಕಾರ ಪರಿಹಾರ ಘೋಷಣೆ ಮಾಡಿದರೂ ಕೂಡ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸರಿಯಾಗಿ ಪರಿಹಾರ ನೀಡುವಲ್ಲಿ ವಿಳಂಬವಾಗಿದೆ. ಈ ಕೂಡಲೇ ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.