ETV Bharat / state

ಈರುಳ್ಳಿ ತಂದ ಕಣ್ಣೀರು: ಗಗನಕ್ಕೇರಿದ ಈರುಳ್ಳಿ ಬೆಲೆ, ರೈತ ಕಂಗಾಲು! - ಧಾರವಾಡ ಜಿಲ್ಲೆ ಸುದ್ದಿ

ಮಳೆಯಲ್ಲಿ ಕೊಳೆತು ಹೋಗುತ್ತಿರೋ ಈರುಳ್ಳಿಯನ್ನು ನೋಡಿ, ಈರುಳ್ಳಿ ಬೆಳೆದ ರೈತರು ಕಣ್ಣೀರು ಹಾಕುತ್ತಿದ್ದರೆ, ಮತ್ತೊಂದೆಡೆ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಒಂದೇ ಸಲಕ್ಕೆ ರೈತರು ಹಾಗೂ ಗ್ರಾಹಕರಿಗೆ ಈಗ ಈರುಳ್ಳಿ ಕಣ್ಣೀರು ತರಿಸುತ್ತಿದೆ.

Hubli
ಈರುಳ್ಳಿ ತಂದ ಕಣ್ಣಿರು: ಗಗನಕ್ಕೆರಿದ ಈರುಳ್ಳಿ ಬೆಲೆ, ರೈತ ಕಂಗಾಲು
author img

By

Published : Oct 22, 2020, 5:23 PM IST

Updated : Oct 22, 2020, 5:34 PM IST

ಹುಬ್ಬಳ್ಳಿ: ಸತತವಾಗಿ ಸುರಿದ ಮಳೆಯಿಂದಾಗಿ ಬೆಳೆ ನಾಶವಾಗಿ ಕಂಗೆಟ್ಟಿದ್ದ ರೈತರಿಗೆ ಈಗ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರವಾಹಕ್ಕೆ ಕೊಚ್ಚಿ ಹೋಗಿ ಅಳಿದುಳಿದಿದ್ದ ಈರುಳ್ಳಿಯನ್ನ ರೈತರು ಕಾಪಾಡಿಕೊಂಡಿದ್ದರು. ಆದರೆ, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಈರುಳ್ಳಿ ಹೊಲದಲ್ಲಿ ಕೊಳೆತು ಹೋಗುತ್ತಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಈರುಳ್ಳಿ ತಂದ ಕಣ್ಣೀರು: ಗಗನಕ್ಕೇರಿದ ಈರುಳ್ಳಿ ಬೆಲೆ, ರೈತ ಕಂಗಾಲು

ಧಾರವಾಡ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ರೈತರು ಬೆಳೆದ ಈರುಳ್ಳಿ ಬೆಳೆ ಹಾನಿಗೊಳಗಾಗಿದೆ. ಅಳಿದುಳಿದ ಈರುಳ್ಳಿಯನ್ನ ಮಾರುಕಟ್ಟೆಗೆ ತಂದ್ರೆ ಉತ್ತಮ ಬೆಲೆ ಸಿಗದೇ ರೈತರು ಪರದಾಡುತ್ತಿದ್ದಾರೆ. ಎಪಿಎಂಸಿ ಗೆ ಉತ್ತಮ ಗುಣಮಟ್ಟದ ಈರುಳ್ಳಿ ಬಾರದ ಹಿನ್ನೆಲೆ ಧಿಡೀರ್ ಅಂತಾ ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿದಿದ್ದು, ಈರುಳ್ಳಿ ಬೆಳೆದ ರೈತರು ಕಣ್ಣೀರು ಹಾಕುವಂತಾಗಿದೆ. ಗುಣಮಟ್ಟದ ಈರುಳ್ಳಿಗೆ ಎಪಿಎಂಸಿಯಲ್ಲಿಯ ಕ್ವಿಂಟಾಲ್​​​​ಗೆ 5 ರಿಂದ 7 ಸಾವಿರಕ್ಕೂ ಹೆಚ್ಚಿನ ಬೆಲೆಗೆ ಮಾರಾಟವಾಗುತ್ತಿದೆ. ಮಳೆಯಿಂದ ಈರುಳ್ಳಿ ಗುಣಮಟ್ಟ ಕಳೆದುಕೊಂಡಿದ್ದು, ಈಗ ಎಪಿಎಂಸಿಯಲ್ಲಿ ಕ್ವಿಂಟಾಲಿಗೆ 2 ರಿಂದ 3 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದೆ. ಇದು ಈರುಳ್ಳಿ ಬೆಳೆಗಾರರನ್ನ ದಿಕ್ಕುತೋಚದಂತೆ ಮಾಡಿದ್ದು, ಬೆಂಬಲ ಬೆಲೆಯಲ್ಲಿ ಈರುಳ್ಳಿ ಖರೀದಿಸಬೇಕು! ಈರುಳ್ಳಿ ಹಾನಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ 17 ಸಾವಿರ ಹೆಕ್ಟೆರ್ ಪ್ರದೇಶದಲ್ಲಿ ಬೆಳೆದಿದ್ದ ಈರುಳ್ಳಿ ಮಳೆಯಿಂದ ಹಾನಿಯಾಗಿದೆ. ಹೀಗಾಗಿ ಹೆಚ್ಚಿನ ಈರುಳ್ಳಿ ಮಾರುಕಟ್ಟೆಗೆ ಬಾರದೆ ಈರುಳ್ಳಿ ಕೊರತೆ ಶುರುವಾಗಿದೆ. ಇದರ ಪರಿಣಾಮವಾಗಿ ಮಾರುಕಟ್ಟೆಯಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಗಗನಕ್ಕೇರಿದೆ. ಈರುಳ್ಳಿ ಬೆಲೆ ನೂರರ ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಹುಬ್ಬಳ್ಳಿ ಮಾರುಕಟ್ಟೆಯಲ್ಲಿ ಇವತ್ತು 100 ರಿಂದ 110 ರೂಪಾಯಿಗೆ ಒಂದು ಕೆಜಿ ಈರುಳ್ಳಿ ಮಾರಾಟವಾಗುತ್ತಿದ್ದರೆ, ರೈತರಿಗೆ ಮಾತ್ರ ಉತ್ತಮ ಬೆಲೆ ಸಿಗದೇ ಇರುವುದಕ್ಕೆ ರೈತರು ಕಂಗಾಲಾಗಿದ್ದಾರೆ.

ಕಳೆದ ವರ್ಷದ ಪ್ರವಾಹದಿಂದ ತತ್ತರಿಸಿ ಹೋಗಿದ್ದ ರೈತರು, ಈಗ ಮತ್ತೆ ಮಳೆಯಿಂದ ಕಂಗಾಲಾಗಿದ್ದಾರೆ. ಅದರಲ್ಲೂ ಈರುಳ್ಳಿ ಬೆಳೆ ಹಾನಿಯಿಂದ ಜಿಲ್ಲೆಯ ಅನ್ನದಾತರು ಕಣ್ಣೀರು ಹಾಕುತ್ತಿದ್ದಾರೆ. ಈರುಳ್ಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವ ಮೂಲಕ, ಕಣ್ಣೀರು ಹಾಕುತ್ತಿರುವ ರೈತರ ಕಣ್ಣೀರು ಒರೆಸಲು ಸರ್ಕಾರ ಮುಂದಾಗಬೇಕಿದೆ.

Last Updated : Oct 22, 2020, 5:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.