ಹುಬ್ಬಳ್ಳಿ : ಕ್ಷುಲಕ ಕಾರಣಕ್ಕೆ ಯುವಕರಿಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಹಳೇಹುಬ್ಬಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಆನಂದ ನಗರದ ಜೈಲಾನಿ ಶೇಖ್ ಹಾಗೂ ಜಾವೀದ ಶೇಖ್ ಎಂಬುವರ ಮೇಲೆ ಕ್ಷುಲ್ಲಕ ಕಾರಣಕ್ಕೆ 6-7 ಜನ ಯುವಕರ ಗುಂಪು ಹಲ್ಲೆ ಮಾಡಿದೆ.
ಘಟನೆಯಿಂದ ತೀವ್ರವಾಗಿ ಗಾಯಗೊಂಡ ಯುವಕರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ: ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬೈಕ್ ಬಿಟ್ಟು ಪರಾರಿಯಾದ ಯುವಕನ ಬಂಧನ