ETV Bharat / state

2A Reservation: ಪಂಚಮಸಾಲಿ ಮೀಸಲಾತಿಗೆ ಮತ್ತೆ ಹೋರಾಟ- ಬಸವ ಜಯಮೃತ್ಯುಂಜಯ ಶ್ರೀ - ಈಟಿವಿ ಭಾರತ್​ ಕನ್ನಡ ನ್ಯೂಸ್​

Panchamasali Community: ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇಷ್ಠಲಿಂಗ ಪೂಜೆ ಮಾಡುವ ಮೂಲಕ 2ಎ ಮೀಸಲಾತಿಗೆ ಮತ್ತೆ ಹೋರಾಟ ಆರಂಭಿಸುತ್ತೇವೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಬಸವ ಜಯಮೃತ್ಯುಂಜಯ ಸ್ವಾಮೀಜಿ
ಬಸವ ಜಯಮೃತ್ಯುಂಜಯ ಸ್ವಾಮೀಜಿ
author img

By

Published : Aug 17, 2023, 7:44 PM IST

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರ

ಹುಬ್ಬಳ್ಳಿ : ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೇವೆ. ಇದೇ ತಿಂಗಳಿನಿಂದ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಕೂಡಲಸಂಗಮ ಪಂಚಮಸಾಲಿ‌ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಸಮುದಾಯದಲ್ಲಿ ನಿರಾಸೆ ಮೂಡಿದೆ. ಕೂಡಲೇ ತಜ್ಞರ ಸಭೆ ಕರೆದು ಈ ವಿಚಾರವನ್ನು ಇತ್ಯರ್ಥ ಮಾಡಬೇಕು. 2ಎ ಮೀಸಲಾತಿ ಹೈಕೋರ್ಟ್‌ನಲ್ಲಿದೆ, 2ಡಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಬಜೆಟ್ ಅಧಿವೇಶನದ ನಂತರ ಸಭೆ ಕರೆದು ಪರಿಶೀಲನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಆದರೆ ಸಿಎಂ ಯಾವುದೇ ಸಭೆ ಕರೆದಿಲ್ಲ. ಇದರಿಂದ ಸಮಾಜಕ್ಕೆ ನಿರಾಸೆಯಾಗಿದೆ. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇಷ್ಠಲಿಂಗ ಪೂಜೆ ಮಾಡುವ ಮೂಲಕ ಮತ್ತೆ ಹೋರಾಟ ಆರಂಭಿಸುತ್ತೇವೆ. ಸಮುದಾಯದ ಜನತೆ ಹೋರಾಟಕ್ಕೆ ಅಣಿಯಾಗಿದ್ದಾರೆ. ಮೀಸಲಾತಿಯಲ್ಲಿ ಯಾವುದೇ ತಾರ್ಕಿಕ ಅಂತ್ಯ ಸಿಕ್ಕಿಲ್ಲ. ನಮಗೆ ಇನ್ನೂ ಆದೇಶದ ಪ್ರತಿ ಸಿಕ್ಕಿಲ್ಲ.‌ ಈ ಹಿನ್ನೆಲೆಯಲ್ಲಿ ಶ್ರಾವಣ ಮಾಸದಲ್ಲಿ ಹೋರಾಟ ನಡೆಸಲು ರೂಪುರೇಷೆ ಆರಂಭಿಸಿದ್ದೇವೆ ಎಂದು ಸ್ವಾಮೀಜಿ ತಿಳಿಸಿದರು.

ಇದನ್ನೂ ಓದಿ : Bommai: ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡ್ತಿಲ್ಲ, ರೈತರ ಹಿತ ಕಾಯುತ್ತಿದ್ದೇವೆ- ಬೊಮ್ಮಾಯಿ

ಮೀಸಲಾತಿ ವಿಚಾರವನ್ನು ಬಗೆಹರಿಸುವ ಶಕ್ತಿ ಸರ್ಕಾರಕ್ಕಿದೆ.‌ ಸರ್ಕಾರ ಮನಸ್ಸು ಮಾಡಿ ನಮ್ಮ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕು. ಒಂದು ವೇಳೆ 2ಎ ಮೀಸಲಾತಿ ನೀಡದೇ ಹೋದರೂ ಕೇಂದ್ರ ಮತ್ತು ರಾಜ್ಯ ಒಬಿಸಿಯಲ್ಲಿ ಲಿಂಗಾಯತ ಸಮುದಾಯವನ್ನು ಸೇರಿಸಿ. ಪಂಚಮಸಾಲಿ ಸಮುದಾಯದ ಶಕ್ತಿ ಈಗಾಗಲೇ ಕಾಂಗ್ರೆಸ್‌ಗೆ ತಿಳಿದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದೆ. ಆದ್ದರಿಂದ ಇದರ ಋಣ ತಿರಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ನಮ್ಮ ಸಮುದಾಯಕ್ಕೆ ಲೋಕಸಭಾ ಚುನಾವಣೆಯ ಮುನ್ನವೇ ಮೀಸಲಾತಿ ಘೋಷಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸ್ವಾಮೀಜಿ ಒತ್ತಾಯಿಸಿದರು.

ಸಿದ್ದರಾಮಯ್ಯನವರ ಸರ್ಕಾರದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯದ 12 ಜನ ಶಾಸಕರಿದ್ದಾರೆ. 12ರಲ್ಲಿ 5ರಿಂದ 6 ಜನರಿಗೆ ಸಚಿವ ಸ್ಥಾನ ನೀಡಬೇಕೆಂದು ನಾವು ಮನವಿ ಮಾಡಿದ್ದೆವು. ಆದರೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಶಿವಾನಂದ ಪಾಟೀಲರಿಗೆ ಸಚಿವ ಸ್ಥಾನ ನೀಡಿದೆ.‌ ಮುಂದಾದರೂ ಲಿಂಗಾಯತ ಪಂಚಮಸಾಲಿ ಹೋರಾಟದ ನೇತೃತ್ವದ ವಹಿಸಿದ ವಿನಯ್ ಕುಲಕರ್ಣಿ ಮತ್ತು ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ನೀಡಬೇಕೆಂದು ಸ್ವಾಮೀಜಿ ಆಗ್ರಹಿಸಿದರು.

ಇದನ್ನೂ ಓದಿ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಕಾನೂನು ತಜ್ಞರೊಂದಿಗೆ ಸಭೆ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.