ಹುಬ್ಬಳ್ಳಿ: ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿದ ಸಲಗ ಚಿತ್ರದ ಮೊದಲ ಶೋ ಮುಕ್ತಾಯಗೊಂಡು ಹೊರ ಬರುತ್ತಿರುವ ಸಂದರ್ಭದಲ್ಲಿ ಎರಡು ಗುಂಪಿನ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
ಈ ಘಟನೆ ಹುಬ್ಬಳ್ಳಿಯ ಅಪ್ಸರಾ ಟಾಕೀಸ್ ಮುಂದೆ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪು ಹೊಡೆದಾಡಿಕೊಂಡಿದ್ದು, ಸಿನಿಮಾ ನೋಡಲು ಬಂದವರೇ ಹೊಡೆದಾಡಿದ್ದಾರೆ ಎನ್ನಲಾಗಿದೆ.
ಗಲಾಟೆಯಲ್ಲಿ ಪಾಲ್ಗೊಂಡವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.