ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳನ್ನು ಕಸಬಾಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಾಬಾ ಪರೀಧ, ಶೋಯಬ್, ಮಂಗಲ ಯಾಸೀನ್, ಫಯಾಜ್ ಹತ್ತಿ, ಬಾಗ್ಯಾ ಯಾಸೀನ್ ಬಂಧಿತರು.
ಹಳೆ ಹುಬ್ಬಳ್ಳಿಯ ನಾರಾಯಣಸೋಪ ನಗರದಲ್ಲಿ ಕ್ಷುಲಕ ಕಾರಣಕ್ಕೆ ಗಫರ್ ಜರ್ತಾಗರ್ ಎಂಬುವವನ ಮೇಲೆ ಈ ಗುಂಪು ಹಲ್ಲೆ ಮಾಡಿ ಪರಾರಿಯಾಗಿದ್ದರು. ಹಲ್ಲೆಯಾದ ಗಫಾರ್ ತಲೆಗೆ ಗಂಭೀರ ಗಾಯವಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನೆಲೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.