ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪಿನ ನಡುವೆ ಗಲಾಟೆ ನಡೆದಿದ್ದು, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹುಬ್ಬಳ್ಳಿ ಉಣಕಲ್ ಕ್ರಾಸ್ ಬಳಿ ನಡೆದಿದೆ.
ಉಣಕಲ್ ನಿವಾಸಿ ಕಿರಣ್ ಪವಾರ್, ಅನಿಸ್ ಪವಾರ ಹಾಗೂ ಹರ್ಷ, ನಿತಿನ್ ಅಭಿಷೇಕ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ ಎಂದು ಶಂಕಿಸಲಾಗಿದೆ. ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಗಲಾಟೆಯಲ್ಲಿ ಕಿರಣ್ ಪವಾರ್ ಸಂಗಡಿಗರು ಹರ್ಷ, ಅಭಿಷೇಕ ಎಂಬ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಈ ಘಟನೆಯಲ್ಲಿ ಅಭಿಷೇಕ ಹಾಗೂ ಇನ್ನಿಬ್ಬರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ವಚನಾನಂದ ಶ್ರೀಗಳು ನೀಡಿದ ಬೆಳ್ಳಿ ಗದೆಯನ್ನು ಆಂಜನೇಯನಿಗೆ ಅರ್ಪಿಸಿದ ಸಿಎಂ